
ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ವಿಳಂಬ
ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಖಂಡನೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ._03- ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ವಿಳಂಬವನ್ನು ಖಂಡಿಸಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಂಡಿಸಿದ್ದಾರೆ.
ಈ ಕುರಿತು ಪಪ್ರಕಟಣೆ ನೀಡಿದ್ದು ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಿಸದೇ ಈಗಾಗಲೇ ಒಂದು ತಿಂಗಳು ಕಳೆಯುತ್ತಿದೆ. ಆರ್ಥಿಕವಾಗಿ ಹಿಂದುಳಿದಿರುವ ಅಸಂಖ್ಯಾತ ಬಡ ವಿದ್ಯಾರ್ಥಿಗಳು ಇದರ ಮೇಲೆ ಅವಲಂಬಿತರಾಗಿದ್ದಾರೆ.
ಹೀಗಿದ್ದು ರಾಜ್ಯ ಸರ್ಕಾರವು ಹಣಕಾಸು ಕೊರತೆಯ ನೆಪವೊಡ್ಡಿ ವಿತರಣೆಯಲ್ಲಿ ವಿಳಂಬ ಮಾಡಿರುವುದು ಖಂಡನಾರ್ಹ. ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಬಿಸಿಯೂಟದೊಂದಿಗೆ ಮೊಟ್ಟೆ ವಿತರಿಸುವುದು ಏಕೈಕ ದಾರಿಯಾಗಿದೆ. ಹಾಗೂ ಮೊಟ್ಟೆ ನೀಡುವ ದಿನಗಳಲ್ಲಿ ಹಾಜರಾತಿ ಹೆಚ್ಚಿರುವುದು ಅದರ ಮೇಲಿನ ಅವಲಂಬನೆ ಎಷ್ಟಿದೆ ಎಂಬುದನ್ನು ಎತ್ತಿತೋರಿಸುತ್ತದೆ.
ಬಡ ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಯಾವುದೇ ಸರ್ಕಾರದ ಆದ್ಯ ಜವಾಬ್ದಾರಿಯಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಈ ಕೂಡಲೇ ಮಕ್ಕಳಿಗೆ ಮೊಟ್ಟೆ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಎಐಡಿಎಸ್ಓ ರಾಜ್ಯ ಸಮಿತಿಯು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತದೆ.