IMG_20231103_183458

ಜಯ ಕರ್ನಾಟಕ ರಕ್ಷಣಾ ವೇದಿಕೆ ಬಳ್ಳಾರಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಈಶ್ವರಿ ಆಯ್ಕೆ

 ಕರುನಾಡ ಬೆಳಗು ಸುದ್ದಿ

ಬಳ್ಳಾರಿ ನ 03 – ಇಂದು ನಗರದ ಜೈ ಕರ್ನಾಟಕ ರಕ್ಷಣಾ ವೇದಿಕೆಯ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಕೆ ಶಾಮ್ ಸುಂದರ್ ಅವರ ಆದೇಶದ ಮೇರೆಗೆ ಸರ್ವ ಸದಸ್ಯರ ಸಭೆಯನ್ನು ಕರೆದು ಸರ್ವಾನುಮತದಿಂದ ಶ್ರೀಮತಿ ಈಶ್ವರ್ಯವರನ್ನು ಆಯ್ಕೆ ಮಾಡಿದರು .

    ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರಿಯವರು ಮಹಿಳಾ ಶಕ್ತಿ ಬಹಳ ದೊಡ್ಡದು ಎಲ್ಲಾ ಮಹಿಳೆಯರನ್ನು ಒಟ್ಟುಗೂಡಿಸಿ ಸಂಘದ ಏಳಿಗೆಗಾಗಿ ಸಮಾಜದ ಉದ್ಧಾರಕ್ಕಾಗಿ ಹಗಲಿರುಳು ಶ್ರಮಿಸುತ್ತೇನೆ ನನ್ನ ಮೇಲೆ ನಂಬಿಕೆಯನ್ನು ಇಟ್ಟು ಮಹಿಳಾ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ರಾಜ್ಯಾಧ್ಯಕ್ಷರಿಗೆ ಜಿಲ್ಲಾಧ್ಯಕ್ಷರಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸಿಕೊಳ್ಳುತ್ತೇನೆ ಎಂದು ಹೇಳಿದರು.

     ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕೆ ಪಿ ಹಸೇನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಸುಧಾಕರ ಹೆಗಡೆ ರಾಜ್ಯ ಘಟಕದ ಉಪಾಧ್ಯಕ್ಷೆ ಪಿ. ಭಾಗ್ಯಲಕ್ಷ್ಮಿ, ನಗರ ಘಟಕದ ಅಧ್ಯಕ್ಷೆ ಬಿ.ಸುನಿತಾ, ನಗರ ಉಪಾಧ್ಯಕ್ಷೆ ಬಿ.ಮಾಬಿ, ನಗರ ಕಾರ್ಯದರ್ಶಿ ಬಿ ರಜಿಯಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!