
ಡಿ.10ರಂದು ಎಲ್ಲಾ ಇಲಾಖೆಗಳಲ್ಲಿ
ಮಾನವ ಹಕ್ಕುಗಳ ದಿನಾಚರಣೆ
ಕರುನಾಡ ಬೆಳಗು ಸುದ್ದಿ
ಹೊಸಪೇಟೆ(ವಿಜಯನಗರ) ೦೭- ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನಿರ್ದೇಶನದಂತೆ, ಡಿ.10ರಂದು ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ತಿಳಿಸಿದ್ದಾರೆ.
ಪ್ರತಿ ಜಿಲ್ಲೆಯಲ್ಲಿ ಮತ್ತು ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆಯನ್ನು ಪ್ರತೀ ವರ್ಷದಂತೆ ಈ ವರ್ಷವೂ ಸಹ ವಿಶೇಷವಾಗಿ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಲು ರಾಜ್ಯ ಮಾನವ ಹಕ್ಕುಗಳ ಆಯೋಗವು ನಿರ್ಧಾರವನ್ನು ಕೈಗೊಂಡಿದ್ದು,
ಡಿ.10ಕ್ಕೆ ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆ, ಪ್ರತಿಜ್ಞೆ ಸ್ವೀಕರಿಸಿ, ಈ ಕುರಿತು ಛಾಯಾಚಿತ್ರಗಳು ಮತ್ತು ವೀಡಿಯೊ ಕ್ಲಿಪ್ಪಿಂಗ್‌ಗಳ ಜೊತೆಗೆ ಆಯೋಗಕ್ಕೆ ಹಾಗೂ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ವರದಿಯನ್ನು ಸಲ್ಲಿಸಬೇಕು.