ಸಾಂಸ್ಕೃತಿಕ ಸೌರಭ
ಡಿ.11ರಂದು: ಸಾಂಸ್ಕೃತಿಕ ಕಾರ್ಯಕ್ರಮಗಳು
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, ೦೯- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಡಿ.11 ರಂದು ಸಂಜೆ 5 ಗಂಟೆಗೆ ಬಸವೇಶ್ವರ ನಗರದ ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ ಸಾಂಸ್ಕøತಿಕ ಸೌರಭ ಸಾಂಸ್ಕøತಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಉಪಮಹಾಪೌರೆ ಬಿ.ಜಾನಕಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಎನ್.ಹೇಮಂತ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರಾ.ಎನ್, ಕಲಬುರಗಿ ವಿಭಾಗ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಹೆಚ್.ಚನ್ನೂರ ಹಾಗೂ ಕನ್ನಡ ಪರ ಕಲಾ ಸಂಘಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿರಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಟಿ. ಹೊನ್ನೂರಪ್ಪ ಅವರು ತಿಳಿಸಿದ್ದಾರೆ.
ಸಾಂಸ್ಕøತಿಕ ಕಾರ್ಯಕ್ರಮಗಳು: ಸಿರುಗುಪ್ಪ ಶಾಂತಯ್ಯ.ಎಂ.ಎಂ ತಂಡದಿಂದ ಶಾಸ್ತ್ರೀಯ ಸಂಗೀತ, ಬಳ್ಳಾರಿಯ ರೇಣುಕ.ಎ ಮತ್ತು ಸಂಗಡಿಗರಿಂದ ಸುಗಮ ಸಂಗೀತ, ಹುಲುಗಪ್ಪ ಮತ್ತು ತಂಡದಿಂದ ಜಾನಪದ ಗೀತೆಗಳು, ಎಸ್.ಕೆ.ಆರ್.ಜಿಲಾನಿಬಾಷ ತಂಡದಿಂದ ಸಮೂಹ ನೃತ್ಯ, ಬಸಾಪುರ ಚಂದ್ರಶೇಖರ ತಂಡದಿಂದ ಡೊಳ್ಳು ಕುಣಿತ, ಸಿರುಗುಪ್ಪ ಲಕ್ಷ್ಮಣ ತಂಡದಿಂದ ಹಲಗೆ ವಾದನ, ಕಂಪ್ಲಿಯ ಮಧು ಕಿರಣ್ ಮತ್ತು ತಂಡದಿಂದ ತಾಷಾರಂಡೋಲ್, ಕೆ.ಜಗದೀಶ್ ಮತ್ತು ತಂಡದಿಂದ ಶರಣ ಸಂಗಮ ನಾಟಕ, ಬಸವರಾಜ ಅಮಾತಿ ಮತ್ತು ತಂಡದಿಂದ ಗಮಕ ಮತ್ತು ಕೀರ್ತನೆ ಕಾರ್ಯಕ್ರಮಗಳು ನಡೆಯಲಿವೆ.