ಸಂಜೀವಿನಿ ಸ್ತ್ರೀ ಶಕ್ತಿ ಮಿನಿ ಸೂಪರ್ ಮಾರ್ಕೆಟ್ ಉದ್ಘಾಟನೆ”
ಗ್ರಾಮೀಣ ಬಡ ಮಹಿಳೆಯರಿಗೆ ಜೀವನೋಪಾಯ ರೂಪಿಸುವಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಒಂದು ಪ್ರಯತ್ನ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,28- ಸಂಜೀವಿನಿ ಎನ್.ಆರ್.ಎಲ್.ಎಂ ಯೋಜನೆಯಡಿಯಲ್ಲಿ ಬಳ್ಳಾರಿ ಜಿಲ್ಲಾ ಪಂಚಾಯತ್ ಮೂಲಕ ರೂಪಿಸಿರುವ ಚಟುವಟಿಕೆಗಳಲ್ಲಿ ಉತ್ತಮ ಪ್ರಗತಿ ಕಾಣುತ್ತಿದೆ.
ಗ್ರಾಮೀಣ ಭಾಗದ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಭಾಗವಹಿಸಿ ಯಶಸ್ವಿಯಾಗಿ ಹೊರಹೊಮ್ಮುತ್ತಿರುವುದು ಬೆಳಕಿಗೆ ಬಂದಿರುತ್ತದೆ. ಅದರಂತೆ ಈಗಾಗಲೇ ಯೋಜನೆಯಡಿ ರಚಿಸಿರುವ 100 ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಮೂಲಕ ಸುಮಾರು 6440 ಮಹಿಳಾ ಗುಂಪುಗಳನ್ನು ರಚಿಸಿ, ಸುಮಾರು 2093 ಗುಂಪುಗಳಿಗೆ -ಸಮುದಾಯ ಬಂಡವಾಳ ನಿಧಿಯನ್ನು ಸ್ವ ಸಹಾಯ ಗುಂಪುಗಳಿಗೆ ಸಾಲದ ರೂಪದಲ್ಲಿ ವಿತರಿಸಿ ವಿವಿಧ ಜೀವನೋಪಾಯ ಚಟುವಟಿಕೆಗಳ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಪಡಿಸುವಲ್ಲಿ ಯೋಜನೆಯ ಮೂಲಕ ಪ್ರಯತ್ನಿಸುತ್ತಿದೆ.
ಬಳ್ಳಾರಿ ಜಿಲ್ಲಾ ಹಂತದಲ್ಲಿ ಆಯ್ದ ಸ್ವ ಸಹಾಯ ಗುಂಪು/ಗ್ರಾ.ಪಂ ಮಟ್ಟದ ಒಕ್ಕೂಟದ ವತಿಯಿಂದ ಮಿನಿ ಸೂಪರ್ ಮಾರುಕಟ್ಟೆ ಸ್ಥಾಪನೆ ಮಾಡುವಂತೆ ಕೆಡಿಪಿ ಸಭೆಯಲ್ಲಿ ಚರ್ಚಿಸಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಲಾಗಿರುತ್ತದೆ.
ಅದರಂತೆ ಕ್ರಮವಹಿಸಿ ಬಳ್ಳಾರಿ ನಗರದ ಎಸ್.ಪಿ ವೃತ್ತದ ಬಳಿ ಖಾಲಿ ಇರುವ ತಾಲ್ಲೂಕು ಪಂಚಾಯಿತಿ ಮಳಿಗೆಯಲ್ಲಿ ಬಳ್ಳಾರಿ ತಾಲ್ಲೂಕು ಸಂಗನಕಲ್ಲು ಗ್ರಾಮ ಪಂಚಾಯತ್ ನ ಅರುಣೋದಯ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಡಿ ನೊಂದಾಯಿಸಿಕೊಂಡಿರುವ ದೇವಿಕಾ ಸ್ವ ಸಹಾಯ ಗುಂಪಿನ ಸದಸ್ಯರ ವತಿಯಿಂದ ಮಿನಿ ಸೂಪರ್ ಮಾರುಕಟ್ಟೆ ಸ್ಥಾಪನೆ ಮಾಡಲಾಗಿದೆ.
ಸದರಿ ಮಳಿಗೆಯನ್ನು ದಿನಾಂಕ 27.10.2023 ರಂದು ಡಾ.ಕೆ.ವಿ ತ್ರಿಲೋಕ ಚಂದ್ರ ಭಾ.ಆ.ಸೇ ವಿಷೇಶ ಆಯುಕ್ತರು ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಮಾನ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಡಳಿತ ಅಧಿಕಾರಿ ಜಿಲ್ಲಾ ಪಂಚಾಯತ್ ಬಳ್ಳಾರಿ, ಮಾನ್ಯ ಜಿಲ್ಲಾಧಿಕಾರಿಗಳು ಪ್ರಶಾಂತ್ ಕುಮಾರ ಮಿಶ್ರ .ಮತ್ತು ಮಾನ್ಯ ಮುಖ್ಯ ಕಾರ್ಯನಿರ್ವಹಾಕಅಧಿಕಾರಿಗಳು ರಾಹುಲ್ ಶರಣಪ್ಪ ಸಂಕನೂರ್ ರವರು, ಮಾನ್ಯ ಯೋಜನಾ ನಿರ್ದೇಶಕರು, ಜಿಪಂ ಬಳ್ಳಾರಿ, ಬಳ್ಳಾರಿ ತಾಲೂಕ್ ಪಂಚಾಯತ್ ಕಾರ್ಯನಿರ್ವಹಾಕಧಿಕಾರಿಗಳು ಬಳ್ಳಾರಿ ಮಡಗಿನ ಬಸಪ್ಪ ಮತ್ತು ತಾಲೂಕ್ ಪಂಚಾಯತ್ ಸಂಡೂರ ಕಾರ್ಯನಿರ್ವಾಹಕ ಅಧಿಕಾರಿಗಳು, ಷಡಷ್ಯರಯ್ಯ, ಲೀಡ್ ಬ್ಯಾಂಕ್ ವ್ಯಸವಸ್ಥಾಪಕರು, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಪಕರು ಮತ್ತು ಜಿಲ್ಲಾ ವ್ಯವಸ್ಥಪಕರು ತಾಲೂಕ ಕಾರ್ಯಕ್ರಮ ವ್ಯವಸ್ಥಪಕರು ವಲಯ ಮೇಲ್ವಚಾರಕರು ಜಿಲ್ಲೆಯ ಎಲ್ಲಾ ಸ್ವಸಹಾಯ ಸಂಘದ ಮಹಿಳೆಯರ ನೇತೃತ್ವದಲ್ಲಿ ಸ್ತ್ರೀ ಶಕ್ತಿ ಮಿನಿ ಸೂಪರ್ ಮಾರ್ಕೆಟ್* ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಂಡು ಯಶಸ್ವಿಗೊಳಿಸಲಾಯಿತು.
ಸುಮಾರು 60 ಮಹಿಳಾ ಉದ್ದಿಮೆಗಳಿಂದ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಮಾರಾಟಮಾಡಲಾಗುತ್ತಿದೆ. ಮಾನ್ಯರು ಉದ್ಘಾಟನೆ ನೆರವೇರಿಸಿ ಆಶಯನುದಡಿಯೊಂದಿಗೆ ಮಹಿಳಾ ಕಿರು ಉದ್ದಿಮೆದಾರರೊಂದಿಗೆ ಚರ್ಚಿಸಿ ಆರೈಸಿದರು.