2c136fae-be38-4577-97e1-318669006cc9

ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ
ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಕರುನಾಡ ಬೆಳಗು ಸುದ್ದಿ

ವಿಜಯನಗರ, 9-  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮೇ 10ರಂದು ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಹಾಗೂ ಶಿವಶರಣೆ ಶ್ರೀ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಆಚರಿಸಲಾಗುತ್ತದೆ.

ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುವುದು. ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಆಗಮಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!