
ಬಹದ್ದೂರ್ ಬಂಡಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ
ಶಾಲೆಗೆ ನ್ಯಾಯಾಧೀಶರ ಭೇಟಿ: ಪರಿಶೀಲನೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, ೨೩- ಶಾಲಾ ಕೊಠಡಿಗಳ ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಶಾಲೆಗೆ ಗುರುವಾರ ನ್ಯಾಯಾಧೀಶರು ಭೇಟಿ ನೀಡಿ, ಸಮಸ್ಯೆ ಆಲಿಸಿ, ಪರಿಶೀಲನೆ ನಡೆಸಿದರು.
ತಾಲ್ಲೂಕಿ ಬಹದ್ದೂರ್ ಬಂಡಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಎರಡ್ಮೂರು ದಿನಗಳಿಂದ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿದ್ದರು. ಬುಧವಾರ ಡಿಡಿಪಿಐ ಶ್ರೀಶೈಲ್ ಬಿರಾದಾರ್ ಭೇಟಿ ನೀಡಿ, ಪರಿಹರಿಸುವ ಭರವಸೆ ನೀಡಿದರು.
ಆದರೆ ಗುರುವಾರ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವೇಂದ್ರ ಪಂಡಿತ್ ಭೇಟಿ ನೀಡಿ, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಬಳಿಕ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರ ಯೋಗಾನಂದ, ವಿದ್ಯಾರ್ಥಿಗಳು ಇದ್ದರು.