WhatsApp Image 2024-02-28 at 6.08.42 PM

ಬಹು ಶಿಸ್ತೀಯ ಸಂಶೋಧನೆಯು ಹಲವಾರು ಕ್ಷೇತ್ರಗಳ ಜ್ಞಾನ : ಪ್ರೊ.ಬಟ್ಟು ಸತ್ಯನಾರಾಯಣ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ,29- ಬಹುಶಿಸ್ತೀಯ ಸಂಶೋಧನೆಯಲ್ಲಿ ನಿರ್ದಿಷ್ಟ ಸಮಸ್ಯೆಗೆ ಹಲವಾರು ಕ್ಷೇತ್ರಗಳ ಜ್ಞಾನವನ್ನು ಬಳಸಲಾಗುತ್ತದೆ ಎಂದು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಟ್ಟು ಸತ್ಯನಾರಾಯಣ ಅವರು ಅಭಿಪ್ರಾಯ ಪಟ್ಟರು.

ನಗರದ ಹೊರವಲಯದಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಬುಧವಾರ ಸಮಾಜ ವಿಜ್ಞಾನ ನಿಕಾಯದ ವತಿಯಿಂದ ಏರ್ಪಡಿಸಿದ್ದ ‘ಸಮಾಜ ವಿಜ್ಞಾನದಲ್ಲಿ ಬಹುಶಿಸ್ತೀಯ ಪ್ರಚಲಿತ ಸಂಶೋಧನೆಗಳು’ ಎಂಬ ವಿಷಯದ ಕುರಿತು ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಶೋಧನಾ ವಿದ್ಯಾರ್ಥಿಗಳು ಒಂದು ವಿಷಯದಲ್ಲಿ ಸಂಶೋಧನೆಯಲ್ಲಿ ನಿರತವಾಗಿರದೇ ಬಹುಶಿಸ್ತಿಯ ಸಂಶೋಧನೆಗೆಳಿಗೆ ಒತ್ತು ನೀಡಬೇಕು. ಇದರಿಂದ ಸಮಾಜ, ಜನಾಂಗ ಹಾಗೂ ದೇಶದ ಬೆಳವಣಿಗೆಗೆ ಬಹುಶಿಸ್ತೀಯ ಸಂಶೋಧನೆಗಳು ಪೂರಕವಾಗುತ್ತದೆ. ಸಂಶೋಧನೆಯಲ್ಲಿ ವಿಶೇಷ ಕೌಶಲ್ಯಗಳನ್ನು ಬಳಸಿಕೊಂಡು ವೈಜ್ಞಾನಿಕ ರೂಪ ಕೊಡುವುದು ಮುಖ್ಯವಾಗಿದೆ ಎಂದು ಹೇಳಿದರು.

ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಅಶೋಕ್ ಆಲೂರ್ ಅವರು ಮಾತನಾಡಿ, ಬಹುಶಿಸ್ತೀಯ ವಿಧಾನವು ಸಾಮಾಜಿಕ, ಆರ್ಥಿಕ, ರಾಜಕೀಯ, ಮಾನಸಿಕ, ಭೌಗೋಳಿಕ ಅಂಶಗಳನ್ನು ಒಳಗೊಂಡಿದೆ. ಸಂಶೋಧನೆÉಯೂ ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ ಸಮಾಜದ ಬೆಳವಣಿಗೆಗಾಗಿ ಉಪಯುಕ್ತವಾಗಬೇಕು. ಸಂಶೋಧನಾ ವಿದ್ಯಾರ್ಥೀಗಳು ಬಹುಶಿಸ್ತೀಯ ಸಂಶೋಧನೆಗೆ ಹೆಚ್ಚು ಒತ್ತು ನೀಡಿ ಎಂದು ಕರೆ ನೀಡಿದರು.
ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ.ಅನಂತ ಎಲ್ ಝಂಡೇಕರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಶೋಧನಾ ವಿದ್ಯಮಾನಗಳ ಕುರಿತು ತಿಳಿದುಕೊಳ್ಳಲು ಬಹುಶಿಸ್ತೀಯ ಸಂಶೋಧನೆಯೂ ಹೆಚ್ಚು ಮಹತ್ವ ಹಾಗೂ ಪರಿಣಾಮಕಾರಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ ರುದ್ರೇಶ್.ಎಸ್.ಎನ್, ಕುಲಸಚಿವರು (ಮೌಲ್ಯಮಾಪನ) ಪ್ರೊ.ರಮೇಶ್ ಓಲೇಕಾರ್, ವಿತ್ತಾಧಿಕಾರಿ ಪ್ರೊ.ಸದ್ಯೋಜಾತಪ್ಪ, ಸಮ್ಮೇಳನದ ಸಂಚಾಲಕರಾದ ಪ್ರೊ.ಗೌರಿ ಮಾಣಿಕ್ ಮಾನಸ ಹಾಗೂ ಪ್ರೊ.ತಿಪ್ಪೇಸ್ವಾಮಿ.ಹೆಚ್ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಮ್ಮೇಳನದಲ್ಲಿ ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿ ತಮ್ಮ ಸಂಶೋಧನಾ ಕುರಿತಾದ ಪ್ರಬಂಧವನ್ನು ಮಂಡಿಸಿದರು.

ಕಾರ್ಯಕ್ರಮವನ್ನು ಡಾ. ಶ್ರೀದೇವಿ ಆಲೂರ ನಿರೂಪಿಸಿದರು. ಡಾ. ಹೆಚ್. ತಿಪ್ಪೇಸ್ವಾಮಿ ಅತಿಥಿಗಳನ್ನು ಸ್ವಾಗತಿಸಿದರು. ಡಾ.ವೀರಪ್ರಕಾಶ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!