ಬಾಲಚಂದ್ರನ್ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 20- ರಾಜ್ಯ ಸರ್ಕಾರ ಜಾರಿಗೆ ತಂದಿರುವ 05 ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಯನ್ನು ಬಾಲಚಂದ್ರನ್ ಎಸ್. ರವರ ಅಧ್ಯಕ್ಷತೆಯಲ್ಲಿ ಜೂನ್ 20 ರಂದು ಕೊಪ್ಪಳ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಗೃಹಲಕ್ಷ್ಮೀ ಯೋಜನೆಯ ಕುರಿತು ತಾಂತ್ರಿಕ ಸಮಸ್ಯೆಯಿಂದ ಕೆಲವು ಫಲಾನುಭವಿಗಳಿಗೆ ಹಣ ಜಮೆಯಾಗಿರುವದಿಲ್ಲ. ಕೂಡಲೇ ಸರಿಪಡಿಸಲು ಮೇಲಾಧಿಕಾರಿಗಳಿಗೆ ಮಾಹಿತಿ ಸಲ್ಲಿಸಲು ಸಮಿತಿಯ ಅಧ್ಯಕ್ಷರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.
ಗೃಹಜ್ಯೋತಿ, ಶಕ್ತಿ ಯೋಜನೆ, ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಕುರಿತು ತಾಲೂಕ ಮಟ್ಟದ ಅಧಿಕಾರಿಗಳು ವರದಿ ಮಂಡಿಸಿದರು.
05 ಗ್ಯಾರಂಟಿ ಯೋಜನೆಗಳು ಪ್ರತಿ ಫಲಾನುಭವಿಗೆ ತಲುಪುವಂತೆ ಕ್ರಮವಹಿಸಲು ಹಾಜರಿದ್ದ ಎಲ್ಲಾ ಸದಸ್ಯರು, ಅನುಷ್ಠಾನ ಅಧಿಕಾರಿಗಳಿಗೆ ಸಭೆಯ ಅಧ್ಯಕ್ಷರು ಸೂಚಿಸಿದರು.
ಸಭೆಯಲ್ಲಿ ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ, ಸಮಿತಿಯ ಸರ್ವ ಸದಸ್ಯರು, 05 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿಗಳು, ಸಹಾಯಕ ಲೆಕ್ಕಾಧಿಕಾರಿ ರವಿಕುಮಾರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನಮಂತಪ್ಪ, ತಾ.ಪಂ ಸಿಬ್ಬಂದಿಗಳು ಹಾಜರಿದ್ದರು.
