WhatsApp Image 2024-04-11 at 5.47.58 PM

ಬಿಜೆಪಿಯಿಂದ ಮಹಿಳಾ ಮಾತೃ ಸಮಾವೇಶ ಕಾರ್ಯಕ್ರಮ

ಕರುನಾಡ ಬೆಳಗು ಸುದ್ದಿ

ವಿಜಯನಗರ, 11- ಜಿಲ್ಲೆಯ ಲೋಕಸಭಾ ಅಭ್ಯರ್ಥಿಯಾದ ಶ್ರೀ ಬಿ.ಶ್ರೀರಾಮುಲು ರವರು ಬಳ್ಳಾರಿ ನಗರದ ಬಸವ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಘಟಕ ವತಿಯಿಂದ ಆಯೋಜಿಸಿದ್ದ ಮಹಿಳಾ ಮಾತೃ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಚುನಾವಣೆ ಸಹ ಸಂಚಾಲಕರು ಮತ್ತು ವಿಧಾನಪರಿಷತ್ ಸದಸ್ಯರಾದ ಭಾರತೀ ಶೆಟ್ಟಿ ಶಿವಮೊಗ್ಗ ಅವರು,ಕೊಪ್ಪಳ ವಿಧಾನಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು,ರಾಜ್ಯ ಮಹಿಳಾ ಮೋರ್ಚ ಸಹ ಸಂಚಾಲಕರಾದ ಭವ್ಯ ಅಂಬರೀಶ್ ಅವರು, ಬಳ್ಳಾರಿ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಮೂಕ,ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷರಾದ ಕೆ ಸುಗುಣ ಅವರು,ಬಳ್ಳಾರಿ ನಗರ ಬಿಜೆಪಿ ಮುಖಂಡರಾದ ಶ್ರೀಮತಿ ಗಾಲಿ ಅರುಣ ಲಕ್ಷ್ಮಿ ಜನಾರ್ದನ್ ರೆಡ್ಡಿ ಅವರು,ಜೆಡಿಎಸ್ ಜಿಲ್ಲಾಧ್ಯಕ್ಷರಾದ ಮೀನಳ್ಳಿ ತಾಯಣ್ಣ ಅವರು, ಮಹಿಳಾ ಮೋರ್ಚಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಭವಾನಿ ಅವರು,ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಹಾಗೂ ಸ್ಥಳೀಯ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!