IMG-20240430-WA0024

ಬಿಜೆಪಿಯಿಂದ ಮಾತ್ರ ಸರ್ವ ಧರ್ಮಗಳ ಜನಾಂಗದ ಅಭಿವೃದ್ಧಿ- ದೊಡ್ಡನಗೌಡ ಪಾಟೀಲ್

ಕರುನಾಡ ಬೆಳಗು ಸುದ್ದಿ

ಕುಷ್ಟಗಿ: ಕಾಂಗ್ರೆಸ್ ಗಿಂತ ನಮ್ಮ ಅವಧಿಯಲ್ಲೇ ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಹಾಗೂ ಎಸ್ಸಿ-ಎಸ್ಟಿ ಜನಾಂಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದೇವೆ. ಬಿಜೆಪಿಯಿಂದ ಮಾತ್ರ ಸರ್ವ ಧರ್ಮಗಳ ಜನಾಂಗದ ಅಭಿವೃದ್ಧಿ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದರು.

ವಿಧಾನಸಭಾ ಕ್ಷೇತ್ರದ ಕಂದಕೂರ ಮಹಾಶಕ್ತಿ ಕೇಂದ್ರದ ಚುನಾವಣಾ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಕೇವಲ ಅಲ್ಪಸಂಖ್ಯಾತರ ತುಷ್ಠಿಕರಣ ಮಾಡುತ್ತಿದೆ. ಆ ಜನಾಂಗಕ್ಕೂ ಕೂಡ ಹೆಚ್ಚಿನ ಅನುದಾನ ನೀಡದೇ ಕೇವಲ ಭರವಸೆಗೆ ಮಾತ್ರ ಸೀಮಿತವಾಗಿದೆ. ಆದರೆ, ಬಿಎಸ್‌ವೈ, ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಎಲ್ಲ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆ ಎಂದರು.

ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೆ. ಶರಣಪ್ಪ ಮಾತನಾಡಿ, ಜನರ ಬದುಕನ್ನು ಬದಲಾಯಿಸಿದ ಕೇಂದ್ರ ಸರ್ಕಾರದ ಯೋಜನೆಗಳಾದ ಆಯುಷ್ಮಾನ ಭಾರತ, ಗರೀಬ ಕಲ್ಯಾಣ ಅನ್ನ ಯೋಜನೆ, ಉಜ್ವಲಾ ಯೋಜನೆ, ಕಿಸಾನ್ ಸಮ್ಮಾನ ಯೋಜನೆ ಹೀಗೆ ಹತ್ತು ಹಲವಾರು ಯೋಜನೆಗಳು ಜನರ ಮನಸ್ಸಿನಲ್ಲಿ ಅಚ್ಚಾಗಿವೆ. ಈ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ ಹಾಕುವ ಮೂಲಕ ಆಶೀರ್ವದಿಸಿ ಎಂದು ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ಕುಷ್ಟಗಿ ಬಿಜೆಪಿ ಮಂಡಲದ ಅಧ್ಯಕ್ಷ ಮಹಾಂತೇಶ ಬಾದಾಮಿ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಪ್ರಮುಖರಾದ ಸಿ.ಎಮ್.ಹಿರೇಮಠ, ದೇವೆಂದ್ರಪ್ಪ ಬಳೂಟಗಿ, ಬಸವರಾಜ ತವರಗೇರಿ, ಶಶಿಧರ ಕವಲಿ, ನಾಗರಾಜ ಮೇಲಿನಮನಿ, ಜಗ್ಗನಗೌಡ, ಶರಣಪ್ಪ, ಹೊಳಿಯಪ್ಪ ಕುರಿ, ತುಕರಾಮ ಸುರ್ಮೆ, ಶಂಕರಗೌಡ್ರ ಸೇರಿದಂತೆ ಉಭಯ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!