ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ನಾಮಪತ್ರ
ಸಂಸದ ಸಂಗಣ್ಣ ಕರಡಿ ಗೈರು
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 12- ಕ್ಷೇತ್ರದ ನೀರಾವರಿ, ಶಿಕ್ಷಣ ಹಾಗೂ ಮೂಲಭೂತ ಸೌಲಭ್ಯ ಸೇರಿದಂತೆ ಎಲ್ಲಾ ರಂಗದ ಅಭಿವೃದ್ಧಿಗೆ ಶ್ರಮಿಸುವ ಗುರಿ ಹೊಂದಿದ್ದು ಜನರ ಮನ ಒಲಿಸಿ ಮೋದಿಯವರ ಬೆಂಬಲಕಗಕೆ ನಿಲ್ಲಲೂ ಒಂದು ಅವಕಾಶ ಕೋರುವುದಾಗಿ ಬಿಜೆಪಿ ಅಭ್ಯರ್ಥಿ ಡಾ ಬಸವರಾಜ ಕ್ಯಾವಟರ್ ಹೇಳಿದರು.
ಅವರು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರಿಗೆ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ನಾಮಪತ್ರ ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಂಸದ ಅಂಗಣ್ಣ ಕರಡಿ ಸಾಕಷ್ಟು ಅಭಿವೃದ್ಧಿ ಕೆಲಸಗಲನ್ನು ಮಾಡಿದ್ದು ಅವರ ಹಾದಿಯಲ್ಲಿ ಸಾಗುತ್ತೆನೆ, ದೇಶದ ಅಭಿವೃದ್ಧಿಗೆ ಬಿಜೆಪಿ ಅಧಿಕಾರ ಹಿಡಿಯಬೇಕಿದೆ , ಮೋದಿಅವರನ್ನು ವಿಶ್ವವೆ ನಾಯಕ ಎಂದು ಒಪ್ಪಿಕೊಂಡಿದ್ದು ಅವರ ಹ್ಯಾರ್ಟಿಕ್ ಸಾದನೆಗೆ ಕೊಪ್ಪಳ ಸಹ ಬಲ ತುಂಬುವ ವಿಶ್ವಾಸ ವಿದೆ ಎಂದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಬಿ, ಶ್ರೀ ರಾಮೂಲು ಕೊಪ್ಪಳಕ್ಕೆ ಇದೇ 16 ರಂದು ಆಗಮಿಸಲಿದ್ದು ಅವರ ನೇತೃತ್ವದಲ್ಲಿ ರೋಡ್ ಶೋ ನಡೆಸಿ ಬಹಿರಂಗವಾಗಿ ನಾಮ ಪತ್ರ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ, ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್, ವಿ.ಪ ಸದಸ್ಯ ಹೇಮಲತಾ ನಾಯಕ, ಮಾಜಿ ಶಾಸಕ ಬಸವರಾಜ ದಡೆಸಗೂರ, ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರೆಡ್ಟಿ, ಮುಖಂಡ ವಿರೇಶ ಮಹಾಂತಯ್ಯ ಮಠ ಇತರರು ಇದ್ದರು.
ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ ಗೈರು ಹಾಜರಿ ಎದ್ದು ಕಾಣುತ್ತಿತ್ತು.
