ಬಿಜೆಪಿ ಮುಖಂಡ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕ್ಕೆ ಆಗ್ರಹ
ಕರುನಾಡ ಬೆಳಗು ಸುದ್ದಿ
ಬಿಜೆಪಿ ಮುಖಂಡ ಅನಂತಕುಮಾರ ಹೆಗಡೆ ಅವರು ಈ ಮೊದಲಿನಿಂದಲೂ ದಲಿತ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದು, ಇದರಿಂದ ಸಮಾಜದಲ್ಲಿ ಶಾಂತಿ ಕದಡುವ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ.
ಅಲ್ಲದೆ, ಪದೇ ಪದೇ ಸಂವಿಧಾನದ ವಿರುದ್ಧ ಹೇಳಿಕೆ ನೀಡುತ್ತಿರುವುದನ್ನು ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ.
ಅನಂತಕುಮಾರ್ ಹೆಗಡೆ ಅವರು ಈ ರೀತಿಯ ಹೇಳಿಕೆ ನೀಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಒಕ್ಕೂಟ ಎಚ್ಚರಿಸಿದೆ.
ಅಲ್ಲದೆ, ಅನಂತಕುಮಾರ್ ಹೆಗಡೆ ಅವರ ವಿರುದ್ದ ಬಿಜೆಪಿ ರಾಜ್ಯ ಮತ್ತು ರಾಷ್ಟ್ರ ಮುಖಂಡರು ಕ್ರಮಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇಲ್ಲದಿದ್ದಲ್ಲಿ ಬಿಜೆಪಿಯೇ ಅನಂತಕುಮಾರ್ ಹೆಗಡೆ ಮುಖಾಂತರ ಈ ರೀತಿಯ ಹೇಳಿಕೆಗಳನ್ನು ನೀಡಲು ಪ್ರೇರೇಪಿಸುತ್ತಿದ್ದಾರೆಂಬುದು ಮನವರಿಕೆಯಾಗುತ್ತಿದೆ ಎಂದು ಬಿಜೆಪಿ ಮುಖಂಡರ ವಿರುದ್ಧ ಆಕ್ರೋಶ ವ್ತಕ್ತಪಡಿದ್ದಾರೆ.
ದಲಿತ ಸಂಘರ್ಷ ಸಮಿತಿ ಸಾಗರ ಬಣ ರಾಜ್ಯ ಸಂಘಟನಾ ಸಂಚಾಲಕ ಎ. ಮಾನಯ್ಯ, ಮುಖಂಡರಾದ ದುರುಗುಪ್ಪ ತಳವಾರ್, ಶಂಕರ್, ಭೀಮಾ ಶಂಕರ್, ಬಿಸಲಹಳ್ಳಿ ರಾಮೇಶ್, ಗೋನಾಳ್ ಅಂಜಿನಪ್ಪ, ನಾಗೇನಹಳ್ಳಿ ಮಲ್ಲಪ್ಪ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು, ಕಾರ್ಯಕರ್ತರಯ ಭಾಗವಹಿಸಿದ್ದರು.
