
ಬಿಜೆಪಿ ಸಂಸ್ಥಾಪನಾ ದಿನಾಚರಣೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 6- ನಗರದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಇಂದು ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.
ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕ ಅವರು ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಸಂಸ್ಥಾಪನಾ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ವೈ ಎಂ ಸತೀಶ್, ಮಾಜಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಹಿರಿಯ ಬಿಜೆಪಿ ಮುಖಂಡರು ಡಾಕ್ಟರ್ ಮಹಿಪಾಲ್, ಗುತ್ತಿಗನೂರು ವಿರೂಪಾಕ್ಷ ಗೌಡ, ಕೆ ಎ ರಾಮಲಿಂಗಪ್ಪ, ಗಾಲಿ ಲಕ್ಷ್ಮಿ ಅರುಣ ಜನಾರ್ದನ್ ರೆಡ್ಡಿ, ಗೋನಾಳು ರಾಜಶೇಖರ್ ಗೌಡ, ಜೊತೆಗೆ ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.