
ಬಿಜೆಪಿ ಹಗರಣ ಸಮಗ್ರ ತನಿಖೆ
ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 30 ಬಿಜೆಪಿ ಸರ್ಕಾರದ ಅವದಿಯಲ್ಲಿ ಬಿಜೆಪಿ ಶಾಸಕ ಯತ್ನಾಳ ಕೋವಿಡ್ ಹಗರಣದ ಮಾಹಿತಿಯನ್ನು ಆಯೋಗಕ್ಕೆ ನೀಡಲಿ ನಾವು ಸಮಗ್ರ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅವರು ಶನಿವಾರದಂದು ತಾಲೂಕಿನ ಬಸಾಪುರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು.
ಕೋವಿಡ್ ಸಮಯದಲ್ಲಿ ಅಂದಿನ ಸಿಎಂ ಯಡಿಯೂರಪ್ಪ ಸಾಕಷ್ಟು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಅವರ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇರ ಆರೋಪ ಮಾಡಿದ್ದಾರೆ.
ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಅನುಭವಿ ರಾಜಕಾರಣಿ ಹಾಗೂ ಆರ್ಥಿಕವಾಗಿ ತಿಳಿದುಕೊಂಡಿದ್ದಾರೆ ಹಾಗಾಗಿ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಿದ್ದೆವೆ ಎಂದು ಪ್ರಶ್ನೆ ಯೊಂದಕ್ಕೆ ಉತ್ತರಿಸಿದರು.
ಸಿಎಂ ಗರಂ :ಕೊಪ್ಪಳದಲ್ಲಿ ಗೃಹ ಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳಿಗೆ ಕೆಲ ತಿಂಗಳಿಂದ ಅನುದಾನ ಬಂದಿಲ್ಲ ಎಂಬ ಆರೋಪಕ್ಕೆ ಉತ್ತರಿಸಿದ ಅವರು ಯಾಕೆ ಅನುದಾನ ಬಂದಿಲ್ಲ ಎಂದು ಡಿಸಿ ನಲಿನ್ ಅತುಲ್ ಗೆ ಪ್ರಶ್ನಿಸಿದರು. ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತಿದೆ ಎಂದರು. ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಗರಂ ಆದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶುವಕುಮಾರ. ಶಾಸಕ ಕೆ ರಾಘವೇಂದ್ರ ಹಿಟ್ನಾಳ ಇತರರು ಇದ್ದರು.