ಬುಡಕುಂಟಿ ಗ್ರಾಮದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ, 7- ತಾಲೂಕಿನ ಬುಡಕುಂಟಿ ಗ್ರಾಮದಲ್ಲಿ ಶ್ರೀಈಶ್ವರ ದೇವಸ್ಥಾನದ ಆವರಣದಲ್ಲಿ ಎಂ ಎಂ ಜೋಶಿ ನೇತ್ರಾ ವಿಜ್ಞಾನ ಸಂಸ್ಥೆ ಕೊಪ್ಪಳ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಡಾ.ಸಿದ್ದರಾಮಯ್ಯ ವಸ್ತ್ರದ ಉಚಿತ ನೇತ್ರ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮವಾದ ಅಂಗ ಇದನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.
ಬಡ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳ ಆಯೋಜನೆ ಮಾಡುವದರಿಂದ ಅನೇಕ ಬಡ ಜನರಿಗೆ ಅನುಕೂಲವಾಗಿವೆ ಎಂದರು.
ಬಸಯ್ಯ ವಸ್ತ್ರದ ಮಾತನಾಡಿ ಇಂದಿನ ಮನುಷ್ಯನ ಒತ್ತಡದ ಜೀವನದಲ್ಲಿ ಆಹಾರ ಕ್ರಮದಿಂದ ನಿತ್ಯ ಆರೋಗ್ಯದಲ್ಲಿ ಒಂದಲ್ಲಾ ಒಂದು ಸಮಸ್ಯೆ ಕಾಣುತ್ತಿದ್ದೇವೆ. ಪ್ರತಿಯೊಬ್ಬರು 2ರಿಂದ 3 ತಿಂಗಳ ನಂತರ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ದೇಹದ ಆರೋಗ್ಯ ರಕ್ಷಣೆಯ ಜೊತೆಗೆ ಕಣ್ಣಿನ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕೆಂದರು.
ಇದೇ ಸಂದರ್ಭದಲ್ಲಿ 160 ಕ್ಕೂ ಹೆಚ್ಚು ಜನರ ಕಣ್ಣಿನ ತಪಾಸಣೆ ಮಾಡಲಾಯಿತು ತಪಾಸಕರಾದ ಕಾವೇರಿ ಬೆಲ್ಲದ. ಅಮರೇಶ ಬುರಡಿ ಶಿವಪುತ್ರಪ್ಪ ವನಜಬಾವಿ ಸೇರಿದಂತೆ ಮತ್ತು ಇತರರು ಭಾಗವಹಿಸಿದ್ದರು.
