IMG_20240410_091830

ಪತ್ನಿ ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ಪತಿ ?

ಕರುನಾಡ ಬೆಳಗು ಸುದ್ದಿ

ಕೊಪ್ಪಳ,10- ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ಪತ್ನಿಯನ್ನು ಕೊಂದು ತಾನೂ‌ ಆತ್ಮಹತ್ಯೆ ಮಾಡಿಕೊಂಡ ದಾರೂರ ಘಟನೆ ಜರುಗಿದೆ.

ನಿನ್ನೆ ರಾತ್ರಿ ಮನೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತ್ನಿ ಲಕ್ಷ್ಮವ್ವಾ ವಾಲಿಕಾರ (36)ಕೊಲೆ ಮಾಡಿ ಪತಿ ನಿಂಗಪ್ಪ ವಾಲಿಕಾರ್ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ನಿಂಗಪ್ಪ .

ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಕುಡಿತದ ಚಟಕ್ಕೆ ದಾಸನಾಗಿದ್ದ ನಿಂಗಪ್ಪ ಕುಡಿದು ಬಂದು ಮನೆಯಲ್ಲಿ ಪತ್ನಿ ಜೊತೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ.

ಕುಡಿತಕ್ಕಾಗಿಯೇ ಅನೇಕ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

 

Leave a Reply

Your email address will not be published. Required fields are marked *

error: Content is protected !!