Screenshot_2023_1101_093048

   ಕೊಪ್ಪಳ: ಅಮೃತ ನಗರೋತ್ಥಾನ ಯೋಜನೆಯ

           ಕಾಮಗಾರಿಗೆ ಭೂಮಿಪೂಜೆ ನ.15ಕ್ಕೆ

ಕರುನಾಡ ಬೆಳಗು ಸುದ್ದಿ
ಕೊಪ್ಪಳ 14-  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರ ನೇತೃತ್ವದಲ್ಲಿ ಮತ್ತು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರ ಅಧ್ಯಕ್ಷತೆಯಲ್ಲಿ ಕೊಪ್ಪಳ ನಗರದಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತ (ಮುನ್ಸಿಪಾಲಿಟಿ) ಯೋಜನೆಯಡಿಯಲ್ಲಿ ಅಂದಾಜು ಮೊತ್ತ 1799.76 ಲಕ್ಷ ರೂ.ವೆಚ್ಚದಲ್ಲಿ ಕೊಪ್ಪಳ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ನಡೆಯುವ ಕಾಮಗಾರಿಗಳ ಭೂಮಿಪೂಜಾ ಕಾರ್ಯಕ್ರಮವು ನವೆಂಬರ್ 15ರ ಬೆಳಿಗ್ಗೆ 10.30ಕ್ಕೆ ಕೊಪ್ಪಳ ನಗರದ ಬಸವೇಶ್ವರ ವೃತ್ತ (ಗವಿಮಠ ರಸ್ತೆ) ಬಳಿ ನೆರವೇರಲಿದೆ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!