ಬೇಳೂರು ಗ್ರಾಮದಲ್ಲಿ ಸ್ವೀಪ್ ಜಾಥಾ ಕಾರ್ಯಕ್ರಮ (2)

ಬೇಳೂರು ಗ್ರಾಮದಲ್ಲಿ ಸ್ವೀಪ್ ಜಾಥಾ ಕಾರ್ಯಕ್ರಮ

ಕರುನಾಡ ಬೆಳಗು ಸುದ್ದಿ

ಕೊಪ್ಪಳ,20- ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾನ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕಿನ ಕಾತರಕಿ-ಗುಡ್ಲಾನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೇಳೂರು ಗ್ರಾಮದಲ್ಲಿ ನರೇಗಾ ಕಾಯಕ ಬಂಧುಗಳು ಹಾಗೂ ಕೂಲಿಕಾರರಿಂದ ಸ್ವೀಪ್ ಜಾಥಾ ಕಾರ್ಯಕ್ರಮ ಜರುಗಿತು.

ಸ್ವೀಪ್ ಜಾಥಾವು ಬೇಳೂರು ಗ್ರಾಮದ ಬೆಟ್ಟದ ಲಿಂಗೇಶ್ವರ ದೇವಸ್ಥಾನದಿಂದ ಆರಂಭವಾಗಿ ಹಿರೇಸಿಂಧೊಗಿ ರಸ್ತೆಯಲ್ಲಿರುವ ಬಸ್ ನಿಲ್ದಾಣ ದವರೆಗೆ ಕಡ್ಡಾಯ ಮತದಾನ, ನಮ್ಮ ಮತ ನಮ್ಮ ಹಕ್ಕು ಇತ್ಯಾದಿ ಘೋಷಣೆಗಳೊಂದಿಗೆ ಸಾಗಿ ಮುಕ್ತಾಯಗೊಂಡಿತು.

ತಾಲೂಕ ಸ್ವೀಪ್ ನೋಡಲ್ ಅಧಿಕಾರಿ ಹಾಗು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನಮಂತಪ್ಪ ಮಾತನಾಡಿ, ಮೇ-7ರಂದು ಜರುಗುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವುದರ ಮೂಲಕ ಸುಭದ್ರ ದೇಶ ನಿರ್ಮಿಸೋಣ.

ಮತದಾನ ದಿನದಂದು ನಾವು ಸಮಯ ವ್ಯರ್ಥ ಮಾಡದೇ ಚುನಾವಣೆ ಆಯೋಗ ನಿಗದಿಪಡಿಸಿದ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ನಮಗೆ ಸೂಕ್ತ ಎನಿಸುವ ವ್ಯಕ್ತಿಗೆ ಮತ ಚಲಾಯಿಸಬೇಕು. ಕೊಪ್ಪಳ ತಾಲೂಕಿನ ಬೇಳೂರು ಗ್ರಾಮದಿಂದ ಸ್ವೀಪ್ ಕಾರ್ಯಕ್ರಮ ಪ್ರಾರಂಭಿಸಲಾಗಿದ್ದು ಕೂಲಿಕಾರರು ಮತದಾನ ಮಾಡಿ ಇತರರಿಗೆ ಮಾದರಿಯಾಗಬೇಕೆಂದು ಕರೆ ನೀಡಿದರು. ಕಳೆದ ಬಾರಿಗಿಂತ ಈ ಬಾರಿ ವಿನೂತನವಾಗಿ ಸ್ವೀಪ್ ಕಾರ್ಯಕ್ರಮಗಳನ್ನು ಜರುಗಿಸುವ ಮೂಲಕ ಜಿಲ್ಲೆಯ ಮತದಾನ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸೋಣ ಎಂದರು.

ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್ ಮಾತನಾಡಿ, ಮತದಾನ ಪವಿತ್ರವಾದ ಕಾರ್ಯ. ಮತದಾನದ ಮೂಲಕ ದೇಶಕ್ಕೆ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ ಎಂದರು. ಸ್ವೀಪ್ ಕಾರ್ಯಕ್ರಮದಲ್ಲಿ ಸೇರಿರುವ ಎಲ್ಲಾ ನರೇಗಾ ಕೂಲಿಕಾರರು ನಿಮ್ಮ ಕುಟುಂಬದ 18 ವರ್ಷ ಮೇಲ್ಪಟ್ಟ ಸದಸ್ಯರು ಮತ ಚಲಾಯಿಸುವ ಮೂಲಕ ದೇಶಕ್ಕೆ ಸುಭದ್ರ ಆಡಳಿತ ಒದಗಿಸಲು ಕೈ ಜೋಡಿಸೋಣ ಎಂದರು.

ನಂತರ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭ ತಾಲೂಕ ಸ್ವೀಪ್ ಸಮಿತಿ ಸದಸ್ಯರಾದ ಬಸವರಾಜ ಬಳಿಗಾರ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಪಂಚಾಯತ ಅಭಿವೃದ್ದಿ ಅಧಿಕಾರಿ ಪೂರ್ಣೇಂದ್ರಸ್ವಾಮಿ, ಕರವಸೂಲಿಗಾರ ಮರ್ದಾನಸಾಬ, ಡಿಇಒ ನಿಂಗಜ್ಜ ಕರಿಗಾರ, ಕಾಯಕ ಬಂಧುಗಳು, 320 ಕ್ಕೂ ನರೇಗಾ ಕೂಲಿಕಾರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!