2c136fae-be38-4577-97e1-318669006cc9

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು : ಅನಧೀಕೃತ ನೀರೆತ್ತುವುದಕ್ಕೆ ನಿಷೇಧ

ಕರುನಾಡ ಬೆಳಗು ಸುದ್ದಿ

ವಿಜಯನಗರ,31- ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವವಿರುವುದರಿಂದ ವಿವಿಧ ಕುಡಿಯುವ ಯೋಜನೆಗಳಿಗಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸುತ್ತಿದ್ದು, ಅನಧಿಕೃತ ಪಂಪಸೆಟ್‌ಗಳ ಮೂಲಕ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮಾರ್ಚ್ 29ರ ರಾತ್ರಿಯಿಂದಲೇ ಏಪ್ರಿಲ್ 6ರವರೆಗೆ ಪ್ರತಿದಿನ 3000 ಕ್ಯೂಸೆಕ್ಸ್, ಏ. 6ರಂದು 2200 ಕ್ಯೂಸೆಕ್ಸ್ ಸೇರಿ ಒಟ್ಟು 2 ಟಿ.ಎಂ.ಸಿ ನೀರು ಹರಿಸಲು ಅನುಮತಿ ನೀಡಿ ಆದೇಶವಾಗಿದೆ.

ಸಾರ್ವಜನಿಕರಿಗೆ ಸೂಚನೆ : ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ನದಿ ದಂಡೆಯಲ್ಲಿ ಅಳವಡಿಸಿರುವ ಅನಧೀಕೃತ ಪಂಪ್‌ಸೆಟ್‌ಗಳಿಂದ ನೀರೆತ್ತುವುದನ್ನು ನಿಷೇಧಿಸಲಾಗಿದೆ. ಹಾಗೂ ಈ ಅವಧಿಯಲ್ಲಿ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲೀ, ಜನರು ಮತ್ತು ದನಕರುಗಳನ್ನು ನದಿಗೆ ಇಳಿಸುವುದಾಗಲಿ ಹಾಗೂ ನಿರ್ಮಾಣ ಕಾಮಗಾರಿಗಳನ್ನು ನದಿಯಲ್ಲಿ ನಡೆಸುತ್ತಿರುವುದು ಇತ್ಯಾದಿ ಚಟುವಟಿಕೆಗಾಗಿ ನದಿಗೆ ಇಳಿಯದಂತೆ ಸೂಚಿಸಲಾಗಿದೆ.

ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷ ಅಭಿಯಂತರರು ಹಾಗೂ ಭದ್ರ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!