2c136fae-be38-4577-97e1-318669006cc9

ಭಾಗ್ಯನಗರ ಪ.ಪಂ. : ಆಕ್ಷೇಪಣೆ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 20- ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯ ವಾರ್ಡ್ ನಂ.12 ರ ಭಾಗ್ಯನಗರ ಮುಖ್ಯರಸ್ಥೆಯಲ್ಲಿ ಬರುವ ಹಳೆ ಊರು ಆಸ್ತಿ ನಂ.123 ರಲ್ಲಿ ಶ್ರೀ ಗುರುಬಸವೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಇವರು ಸಮುದಾಯ ಭವನ ನಿರ್ಮಿಸಲು ಕಚೇರಿಯಿಂದ ಕಟ್ಟಡ ಪರವಾನಿಗೆ ಕೋರಿ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಈ ಬಗ್ಗೆ ಸಾರ್ವಜನಿಕರಿಗೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಲಿಖಿತ ರೂಪದಲ್ಲಿ ಪಟ್ಟಣ ಪಂಚಾಯತಿ ಕಾರ್ಯಾಲಯಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬೇಕು ಎಂದು ಪ.ಪಂ. ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!