2c136fae-be38-4577-97e1-318669006cc9

ಭಾಗ್ಯನಗರ ಪ.ಪಂ : ಆಸ್ತಿ ಮಾಲೀಕರಿಂದ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 19-ಭಾಗ್ಯನಗರ ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮತ್ತು ಪಟ್ಟಣ ವ್ಯಾಪ್ತಿಯಲ್ಲಿನ ನಿವೇಶನ ರಹಿತ ಬಡ ಕುಟುಂಬದವರಿಗಾಗಿ ಸರ್ಕಾರ ಸೂರು ಕಲ್ಪಿಸುವ ಯೋಜನೆಯನ್ನು ಹೊಂದಿದ್ದು, ಇದಕ್ಕಾಗಿ ಜಮೀನು ಖರೀದಿಸಲು ಭಾಗ್ಯನಗರ ಪಟ್ಟಣ ವ್ಯಾಪ್ತಿಯಲ್ಲಿನ ಜಮೀನು ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಮೀನುಗಳನ್ನು ಸರ್ಕಾರದಿಂದ ನಿಗದಿಪಡಿಸಿದ ಸೂಕ್ತ ದರದಲ್ಲಿ 14 ರಿಂದ 15 ಎಕರೆ ಜಮೀನು ಒದಗಿಸಲು ಈ ಮುಂಚೆಯೂ ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಆದರೆ ಇದುವರೆಗೂ ಯಾವುದೇ ಜಮೀನು ಮಾಲೀಕರು ಮುಂದೆ ಬಂದಿರುವುದಿಲ್ಲ.

ಆದ್ದರಿಂದ ನಿವೇಶನ ರಹಿತರಿಗೆ ಹಂಚಲು ತಮ್ಮ ಜಮೀನುಗಳನ್ನು ಸರ್ಕಾರ ನಿಗದಿಪಡಿಸಿದ ದರಗಳಿಗೆ ಒದಗಿಸಲು ಇಚ್ಛೆಯುಳ್ಳ ಜಮೀನು ಮಾಲೀಕರು ಭಾಗ್ಯನಗರ ಪಟ್ಟಣ ಪಂಚಾಯತಿಗೆ ಜುಲೈ 18 ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಪಟ್ಟಣ ಪಂಚಾಯತಿ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಪಟ್ಟಣ ಪಂಚಾಯತಿ ಆಡಳಿತಾಧಿಕಾರಿಗಳು ಹಾಗೂ ಮುಖ್ಯಾಧಿಕಾರಿಗಳು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!