WhatsApp Image 2024-01-31 at 4.04.15 PM

ಭಾರತ ಸಂವಿಧಾನ ಜಗತ್ತಿನಲ್ಲಿಯೇ ಅತಿ ಶ್ರೇಷ್ಠ ಸಂವಿಧಾನ: ಆಲಂ ಭಾಷಾ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ,31- ಭಾರತದ ಸಂವಿಧಾನವು ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಮತ್ತು ಶ್ರೇಷ್ಠ ಸಂವಿಧಾನವಾಗಿದ್ದು, ದೇಶದ ಆಡಳಿತ ನಿರ್ವಹಣೆ, ಅಭಿವೃದ್ಧಿಯಲ್ಲಿ ಪ್ರಧಾನ ಪಾತ್ರ ವಹಿಸಿದೆ ಎಂದು ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕರಾದ ಆಲಂ ಭಾಷಾ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ಸಂವಿಧಾನ ಜಾಗೃತಿ ಜಾಥಾ” ಅಂಗವಾಗಿ ಬಳ್ಳಾರಿ ತಾಲ್ಲೂಕಿನ ಶಂಕರಬಂಡೆ ಗ್ರಾಮದಲ್ಲಿ ಇಂದು ಸಂಜೆ ನಡೆದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ರಚನಾಕರ್ತರಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಜಗತ್ತಿನ ಬಹುತೇಕ ಸಂವಿಧಾನಗಳನ್ನು ಅಧ್ಯಯನ ಮಾಡಿ ದೇಶಕ್ಕೆ ಸರ್ವಶ್ರೇಷ್ಟ ಸಂವಿಧಾನವನ್ನು ನೀಡಿದ್ದಾರೆ ಎಂದು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಂಕರ ಬಂಡೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಕೃಷ್ಣವೇಣಿ ಅವರು ವಹಿಸಿದ್ದರು.
ಇದೇ ಸಂದರ್ಭದಲ್ಲಿ ಸಂವಿಧಾನ ಪ್ರಸ್ತಾವನೆಯನ್ನು ಭೋದಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಬಿ.ಸಣ್ಣಬಸಪ್ಪ, ಟಿ.ಎರಿಸ್ವಾಮಿ, ಪಂಪನ ಗೌಡ್ರು, ಕಂದಿನಾರಾಯಣ ರೆಡ್ಡಿ, ನರಸಿಂಹಲು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಾಬ್ ಜಾನ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು‌ ಮತ್ತು ಸಿಬ್ಬಂದಿ ವರ್ಗದವರಾದ ಉಷಾಕುಮಾರಿ, ಶಿವಪ್ಪ, ರುದ್ರಾಚಾರ್, ಶೇಖಣ್ಣ, ಬಸವರಾಜ ಮೊದಲಾದವರು ಉಪಸ್ಥಿತರಿದ್ದರು.
ರಾಮಣ್ಣ ಸ್ವಾಗತಿಸಿ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!