
ಮಂಗಳೂರು ಐಟಿಐ : ಪ್ರವೇಶಕ್ಕಾಗಿ ಅವಧಿ ವಿಸ್ತರಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 3- ಮಂಗಳೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್-2024 ನೇ ಸಾಲಿನ ಐಟಿಐ ಪ್ರವೇಶಕ್ಕಾಗಿ ಈ ಹಿಂದೆ ನಿಗದಿಪಡಿಸಿದ್ದ ಅಂತಿಮ ದಿನಾಂಕವನ್ನು ಜೂನ್ 09 ರವರೆಗೆ ವಿಸ್ತರಿಸಲಾಗಿದೆ.
ಸಂಸ್ಥೆಯಲ್ಲಿ ಎಲೆಕ್ಟಿçಷಿಯನ್ ಮತ್ತು ಫಿಟ್ಟರ್ ಕೋರ್ಸ್ಗಳು ಅನುಷ್ಠಾನಗೊಂಡಿದ್ದು, ಪ್ರತಿ ಕೋರ್ಸಿನಲ್ಲಿ 16 ಸ್ಥಾನಗಳು ಲಭ್ಯವಿರುತ್ತವೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಗಳನ್ನು ಖುದ್ದಾಗಿ ಅಥವಾ ಇಂಟರ್‌ನೆಟ್ ಸೆಂಟರ್‌ಗಳಲ್ಲಿ ಅಥವಾ ಸಂಸ್ಥೆಗೆ ಭೇಟಿ ನೀಡಿ www.cite.karnataka.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೇಯಲ್ಲಿ ಸಂಸ್ಥೆಗೆ ಭೇಟಿ ನೀಡಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.