
ಮಂಗಳೂರಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಕರುನಾಡ ಬೆಳಗು ಸುದ್ದಿ
ಕುಕನೂರ-09ತಾಲೂಕಿನ ಮಂಗಳೂರು ಗ್ರಾಮದ ಕೆ ಎಸ್ ಆಸ್ಪತ್ರೆ ಕೊಪ್ಪಳ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಸ್) ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಕೆ ಎಸ್ ಆಸ್ಪತ್ರೆಯ ಸ್ತ್ರೀ ರೋಗ ತಜ್ಞರಾದ ಡಾ||ಸವಿತಾ ಮಾತನಾಡಿ ಗ್ರಾಮದ ಸ್ತ್ರೀಯರು ಸ್ತ್ರೀ ರೋಗ ಸಮಸ್ಯೆಗಳ ಬಗ್ಗೆ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ|ಶಶಾಂಕರಡ್ಡಿˌಡಾ|ಅರ್ಷಿಯಾˌಡಾ|ಆಪ್ರೀನ್ˌ ಮಾರ್ಕೆಟಿಂಗ್ ಡಿಪಾರ್ಟ್ಮೆಂಟ ಪ್ರವೀಣ್ ಶಾಕಿರ್ ಹಾಗೂ ಆಸ್ಪತ್ರೆಯ ಸಿಬ್ಬಂದಿಯವರು ಹಾಜರಿದ್ದರು.
ಕೆಪಿಎಸ್ ಶಾಲೆಯ ಹಲವಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ವೈದ್ಯರ ಬಳಿಗೆ ಬಂದು ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡರು.