
12 ರಂದು ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಭಾಗೀದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 8- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಜಿಲ್ಲೆಯ ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಭಾಗೀದಾರರೊಂದಿಗೆ ಜುಲೈ 12 ರಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 01.30 ಗಂಟೆಯವರೆಗೆ ಸಮಾಲೋಚನಾ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ.ರಾಮತ್ನಾಳ್ ಅವರು ವಹಿಸಿಕೊಳ್ಳುವರು. ಆದ್ದರಿಂದ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪ್ರಸ್ತುತ ಸಾಲಿನ ಮಾಹಿತಿ ಹಾಗೂ ಕಳೆದ ಸಭೆಯ ನಡಾವಳಿಗಳಿಗೆ ಅನುಪಾಲನಾ ವರದಿಯೊಂದಿಗೆ ಸಮಯಕ್ಕೆ ಸರಿಯಾಗಿ ಖುದ್ದಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.