
ಮತಗಟ್ಟೆಗೆ ಚುನಾವಣಾ ವೀಕ್ಷಕರ ಭೇಟಿ : ಮತದಾನ ಪ್ರಕ್ರಿಯೆ ವೀಕ್ಷಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 3- ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ ಪ್ರಯುಕ್ತ ಜೂನ್ 3ರಂದು ನಡೆದ ಮತದಾನದ ಹಿನ್ನೆಲೆಯಲ್ಲಿ ಕೊಪ್ಪಳ ನಗರದ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿನ ಮತಗಟ್ಟೆ ಸಂಖ್ಯೆ 128 ಹಾಗೂ 128ಎಗೆ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣಾ ವೀಕ್ಷಕರಾದ ಮಹೇಶ್ವರ ರಾವ್ ಅವರು ಸೋಮವಾರ ಭೇಟಿ ನೀಡಿ, ಮತದಾನ ಪ್ರಕ್ರಿಯೆಯನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಹೊಸಪೇಟೆ ಉಪವಿಭಾಗಾಧಿಕಾರಿಗಳಾದ ಮಹದ್‌ಅಲಿ ಅಕ್ರಮ್ ಷಾಹ, ಕೊಪ್ಪಳ ತಹಶೀಲ್ದಾರ ವಿಠ್ಠಲ್ ಚೌಗಲಾ, ತಾಪಂ ಇಓ ದುಂಡಪ್ಪ ತುರಾದಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ಮತ್ತಿತರರಿದ್ದರು.