2c136fae-be38-4577-97e1-318669006cc9

ಮತ್ಸ್ಯ ವಾಹಿನಿ ಯೋಜನೆಯಡಿ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ

ಕರುನಾಡಬೆಳಗು ಸುದ್ದಿ

ಕೊಪ್ಪಳ,12- ಸ್ಥಳೀಯವಾಗಿ ಮೀನು ಸೇವನೆಯನ್ನು ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಮತ್ಸö್ಯವಾಹಿನಿ ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.

ಕೊಪ್ಪಳ ಜಿಲ್ಲೆಗೆ 03 ಭೌತಿಕ ಗುರಿಗಳಿದ್ದು, ಆಯ್ಕೆಯಾಗುವ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿ ಮೊತ್ತ (ರೂಪಾಯಿ 1.00 ಲಕ್ಷ ಸಾಮಾನ್ಯ ವರ್ಗದವರು, 0.50 ಲಕ್ಷ ಪರಿಶಿಷ್ಟ ಜಾತಿ/ಪಂಗಡ/ಮಹಿಳೆ) ವನ್ನು ನೀಡಬೇಕಿರುತ್ತದೆ ಹಾಗೂ ಮಾಸಿಕ ರೂ.3,000/- ಬಾಡಿಗೆ ಮೊತ್ತವನ್ನು ಪಾವತಿಸಬೇಕಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 16 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಗಂಗಾವತಿ, ಕೊಪ್ಪಳ, ಕುಷ್ಟಗಿ ಇವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!