
ಮಹಿಳೆಯರ ಸಬಲೀಕರಣ ಬಿಜೆಪಿ ಇಂದ ಮಾತ್ರ ಸಾಧ್ಯ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 11- ಮಹಿಳೆಯರ ಸಬಲೀಕರಣ ಮತ್ತು ಆರ್ಥಿಕ ಪುರ ಅಭಿವೃದ್ಧಿಗೆ ಹಲವಾರು ಯೋಜನೆಗಳು ಜಾರಿ ಗೊಳಿಸುವುದು, ಒಂದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಭಾರತಿ ಶೆಟ್ಟಿ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡುತ್ತಾ ಪ್ರಧಾನಿ ಮೋದಿ ಅವರು ಈಗಾಗಲೇ ಹಲವಾರು ಯೋಜನೆಗಳು ಮಹಿಳೆಯರಿಗಾಗಿ ಅನುಷ್ಠಾನಗೊಳಿಸಿದ್ದಾರೆ ಎಂದು, ಮಹಿಳೆಯರ ಆರ್ಥಿಕ ಚೈತನ್ಯಕ್ಕೆ ಮೋದಿಜಿ ಸರ್ಕಾರ ಕೊಡುಗೆ ಬಹಳ ದೊಡ್ಡದು ಎಂದು ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ ಈ ಲೋಕಸಭಾ ಕ್ಷೇತ್ರದಲ್ಲಿ ಶೇಕಡ 52ರಷ್ಟು ಮಹಿಳಾ ಮತದಾರರು ಇದ್ದಾರೆ ಎಂದು, ಮಹಿಳೆಯರಿಗಾಗಿ ಶೇ 33ರಷ್ಟು ಮೀಸಲಾತಿ ಕಲ್ಪಿಸಲು ಮುಂದಾಗಿದ್ದಾರೆ ಎಂದರು.
ಇನ್ನು ಬಡ್ಡಿ ರಹಿತ ಸಾಲ ನೀಡುವುದರ ಜೊತೆಗೆ, ಬೀದಿ ಮದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಭದ್ರತೆ ಇಲ್ಲದೆ ಸಾಲ ನೀಡುತ್ತಿದೆ, ಮುದ್ರಾ ಯೋಜನೆಯಲ್ಲಿ ಶೇಕಡ 69 ಸಾಲವನ್ನು ಮಹಿಳೆಯರಿಗೆ ನೀಡುವ ಮೂಲಕ ಅವರ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಸುದ್ದುಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಹೇಮಲತಾ ನಾಯಕ್, ಪಾಲಿಕೆ ಸದಸ್ಯ ಸುರೇಖಾ ಮಲ್ಲನಗೌಡ, ಜಿಲ್ಲಾ ಅಧ್ಯಕ್ಷ ಸುಗುಣ, ಭಾಗ್ಯಲಕ್ಷ್ಮಿ ಪಕ್ಷದ ಮುಖಂಡರಾದ ಸುಮಾರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.