IMG-20240626-WA0194

ಮಾದಕ ವಸ್ತು ಮುಕ್ತಕ್ಕೆ ಯುವಕರು ಕೈಜೋಡಿಸಲಿ : ಡಾ.ಗವಿಸಿದ್ದಪ್ಪ ಮುತ್ತಾಳ್

ಕರುನಾಡ ಬೆಳಗು ಸುದ್ದಿ

ಅಳವಂಡಿ, 26- ವಿದ್ಯಾರ್ಥಿ ಜೀವನವು ಅತ್ಯಮೂಲ್ಯವಾಗಿದ್ದು, ಮಾದಕ ವಸ್ತುಗಳ ಸೇವನೆ ಸೇರಿದಂತೆ ವಿವಿಧ ದುಶ್ಚಟಗಳಿಗೆ ದಾಸರಾಗಿ ಅದನ್ನು ಹಾಳು ಮಾಡಿಕೊಳ್ಳಬಾರದು ಎಂದು ಪ್ರಾಂಶುಪಾಲರಾದ ಡಾ. ಗವಿಸಿದ್ದಪ್ಪ ಮುತ್ತಾಳ್ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಶ್ರೀ ಶಿವಮೂರ್ತಿ ಸ್ವಾಮಿ ಇನಾಮದಾರ್ ಕಟ್ಟಿಮನಿ ಹಿರೇಮಠ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಅಳವಂಡಿ ಪೊಲೀಸ್ ಠಾಣೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಸೇವನೆಯೂ ಅನೇಕ ಅಪರಾಧಕೃತ್ಯಕ್ಕೆ ದಾರಿ ಮಾಡಿಕೊಡುತ್ತದೆ. ಮಾದಕ ವ್ಯಸನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಜತೆಗೆ ಅದನ್ನು ಸಂಪೂರ್ಣ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು.

ಮಾದಕ ವ್ಯಸನಕ್ಕೆ ದಾಸರಾಗುತ್ತಿರುವ ಯುವಜನತೆ ತಮ್ಮ ಜೀವನವನ್ನೇ ಹಾಳು ಮಾಡಿಕೊಂಡಿದ್ದಾರೆ. ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು ಅರಿತುಕೊಂಡು ಬೇರೆಯವರಿಗೂ ಜಾಗೃತಿ ಮೂಡಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಲು ವಿದ್ಯಾರ್ಥಿಗಳ ಶ್ರಮಿಸಬೇಕು ಎಂದರು.

ಅಳವಂಡಿ ಪೋಲಿಸ್ ಠಾಣೆಯ ಪಿ.ಎಸ್.ಐ ನಾಗರಾಜ್ ಹೆಚ್ ಮಾತನಾಡಿ, ಮಾದಕವಸ್ತುಗಳ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಹಾಗಾಗಿ ವಿದ್ಯಾರ್ಥಿಗಳು ಇದರಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಅಳವಂಡಿ ಪೋಲಿಸ್ ಠಾಣೆಯ ಎ.ಎಸ್.ಐ ಶಶಿಕಾಂತ್, ಕಾಲೇಜಿನ ಉಪನ್ಯಾಸಕರಾದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೋ. ಇಮಾಮ್ ಸಾಬ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಪ್ರೋ. ಮಲ್ಲಿಕಾರ್ಜುನ್, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೋ. ಜಗದೀಶ್, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ನಾಗೇಂದ್ರಪ್ಪ, ಉಪನ್ಯಾಸಕರಾದ ವಿಜಯ್ ಕುಮಾರ್ ಕುಲಕರ್ಣಿ,ಸಿದ್ದಪ್ಪ, ಪ್ರದೀಪ್ ಪಲ್ಲೇದ್ , ವೆಂಕಟೇಶ್ , ಅನಿಲ್, ವಿನಾಯಕ್ ನಾಯ್ಕ್, ವೀರಯ್ಯ ಮಠದ್, ರಹಿಮಾನ್ ಸಾಬ್ , ರಾಘವೇಂದ್ರ , ಹನುಮೇಶ್ , ಕೃಷ್ಣ, ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!