
ಮಾರ್ಚ್ 31ರಂದು ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಕಾರ್ಯಕರ್ತರ ಸಮಾವೇಶ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,28- ಲೋಕಸಭಾ ಚುನಾವಣೆ ನಗರದ ಕಮ್ಮವಾರಿ ಕಲ್ಯಾಣ ಮಂಟಪದಲ್ಲಿ ಮಾರ್ಚ್ 31ರಂದು ಮಧ್ಯಾಹ್ನ 3 ಗಂಟೆಗೆ ಸಿರುಗುಪ್ಪ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ಪೂರ್ವಭಾವಿ ಆಯೋಜಿಸಲಾಗಿದೆ ಎಂದು ಸಿರುಗುಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಕರಿಬಸಪ್ಪ ತೆಕ್ಕಲಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರುದ್ರ ಗೌಡ ಗ್ಯಾರಂಟಿ ಯೋಜನಾ ಪ್ರಾಧಿಕಾರ ತಾಲೂಕ ಅಧ್ಯಕ್ಷ ಎಂ ಹೊರ ಪ್ರಸಾದ ರೆಡ್ಡಿ ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಕೊಪ್ಪಳ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ ರಾಜಶೇಖರ್ ಹಿಟ್ನಾಳ್ ಸಿರುಗುಪ್ಪ ಜನಪ್ರಿಯ ಶಾಸಕ ಬಿ ಎಂ ನಾಗರಾಜ ಮಾಜಿ ಶಾಸಕ ಟಿಎಂ ಚಂದ್ರಶೇಖರಯ್ಯ ಕಾಂಗ್ರೆಸ್ ಮುಖಂಡರು ಪ್ರಮುಖರು ಕಾರ್ಯಕರ್ತರು ಯುವ ಮುಖಂಡರು ಯುವ ಕಾರ್ಯಕರ್ತರು ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಮಾಜಿ ಸದಸ್ಯರು ನಗರಸಭೆ ಪಟ್ಟಣ ಪಂಚಾಯತ್ 27 ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಕಾಂಗ್ರೆಸ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಪ್ಪದೇ ಭಾಗವಹಿಸಬೇಕು ಎಂದು ಅವರು ತಿಳಿಸಿದರು.