2c136fae-be38-4577-97e1-318669006cc9

ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗಾಗಿ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 12- 2024-25ನೇ ಸಾಲಿನ ಕೃಷಿ ಪ್ರಶಸ್ತಿಯಡಿ ಮುಂಗಾರು ಹಂಗಾಮಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ಆದೇಶದನ್ವಯ ಪ್ರಸಕ್ತ ಸಾಲಿನ ಕೃಷಿ ಪ್ರಶಸ್ತಿ ಹಾಗೂ ಕೃಷಿ ಪಂಡಿತ ಪ್ರಶಸ್ತಿ ಕಾರ್ಯಕ್ರಮಗಳನ್ನು ಮುಂದುವರೆಸಲಾಗಿರುತ್ತದೆ. ಈ ಸಂಬಂಧ, 2024-25ನೇ ಸಾಲಿನ ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಸಕ್ತ ಸಾಲಿನ ಕೃಷಿ ಪ್ರಶಸ್ತಿ ಹಾಗೂ ಕೃಷಿ ಪಂಡಿತ ಪ್ರಶಸ್ತಿ ಕಾರ್ಯಕ್ರಮಗಳನ್ನು ಆನ್‌ಲೈನ್ ಮೂಲಕ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ (ಏ-ಏisಚಿಟಿ Poಡಿಣಚಿಟ)ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿರುತ್ತದೆ. ಸಿಟಿಜನ್ ಲಾಗಿನ್ ಅಥವಾ ಆರ್.ಎಸ್.ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸೇವಾ ಕೇಂದ್ರದಲ್ಲಿ ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಸದರಿ ಕೆ-ಕಿಸಾನ್ ಪೋರ್ಟಲ್ ರಡಿ ಅಗತ್ಯ ಮಾಹಿತಿಗಳೊಂದಿಗೆ ತಮ್ಮ ಎಫ್‌ಐಡಿ (ಫ್ರೂಟ್ಸ್ ಐಡೆಂಟಿಫಿಕೇಶನ್) ಯನ್ನು ಬಳಸಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.

ಅಲ್ಲದೇ ಸರ್ಕಾರಿ ಆದೇಶದಂತೆ ಪ್ರಸಕ್ತ ಸಾಲಿನಿಂದ ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ಅರ್ಜಿ ಶುಲ್ಕವನ್ನು ರದ್ದುಗೊಳಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ಆಗಷ್ಟ್ 31 ಕೊನೆಯ ದಿನವಾಗಿದೆ. ಕೃಷಿ ಪ್ರಶಸ್ತಿ ಯೋಜನೆಯಡಿ ರಾಜ್ಯ ಮಟ್ಟದ ಬೆಳೆ ಸ್ಪರ್ಧೆಗೆ ನೀರಾವರಿ ಮತ್ತು ಮಳೆಯಾಶ್ರಿತ ಭತ್ತ ಹಾಗೂ ಮಳೆಯಾಶ್ರಿತ ಶೇಂಗಾ, ನವಣೆ, ಸಜ್ಜೆ, ಮುಸುಕಿನ ಜೋಳ ಮತ್ತು ತೊಗರಿ (ಪೂರ್ಣ ಬೆಳೆ), ಈ ಎಲ್ಲಾ ಮುಂಗಾರು ಹಂಗಾಮಿನ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಕೆ-ಕಿಸಾನ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!