ಯಲಬುರ್ಗಾ : ಮೆಟ್ರಿಕ್ ಪೂರ್ವ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 20- 2024-25ನೇ ಸಾಲಿಗಾಗಿ ಯಲಬುರ್ಗಾ / ಕುಕನೂರ ತಾಲೂಕಾ ವ್ಯಾಪ್ತಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಬಾಲಕರ / ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕುಕನೂರು ತಾಲ್ಲೂಕಿನ ಬನ್ನಿಕೊಪ್ಪದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಹಾಗೂ ಯಲಬುರ್ಗಾ ತಾಲ್ಲೂಕಿನ ತಾಳಕೇರಿಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಗಳಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.tw.kar.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ವಿದ್ಯಾಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಅರ್ಜಿಯ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಹಿಂದಿನ ತರಗತಿಯ ಅಂಕಪಟ್ಟಿಗಳ ದೃಢೀಕೃತ ಝರಾಕ್ಸ್ ಪ್ರತಿ, ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಕಾರ್ಡ್ಗಳ ಝರಾಕ್ಸ್ ಪ್ರತಿ ಮತ್ತು ಪಾಸ್‌ಪೋರ್ಟ್ ಅಳತೆಯ 04 ಭಾವಚಿತ್ರಗಳನ್ನು ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಯಲಬುರ್ಗಾ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
