
ಮೌಲಾನಾ ಆಜಾದ್ ಆಂಗ್ಲಮಾಧ್ಯಮ ಶಾಲೆಗೆ ಜೂನ್ 1ಕ್ಕೆ ಪ್ರವೇಶ ಪರೀಕ್ಷೆ
ಕರುನಾಡ ಬೆಳಗು ಸುದ್ದಿ
ವಿಜಯನಗರ, 29- 2024-25ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಸರಕಾರಿ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಹೊಸಪೇಟೆ ಶಾಲೆಯಲ್ಲಿ 6ನೇ ತರಗತಿಯಿಂದ 9ನೇ ತರಗತಿಯವರೆಗಿನ ದಾಖಲಾತಿ ಪ್ರಕ್ರಿಯೆ ಆರಂಭವಾಗಿರುತ್ತದೆ.
ಈ ಶಾಲೆಗಳು ಆಂಗ್ಲ ಮಾಧ್ಯಮ ಶಾಲೆಗಳಾಗಿದ್ದು, 2022-23ನೇ ಸಾಲಿನಲ್ಲಿ ಶೇಕಡಾ 100ರಷ್ಟು ಫಲಿತಾಂಶ ದಾಖಲಿಸಿವೆ. ಉತ್ತಮ ಅನುಭವಿ ಶಿಕ್ಷಕರು ಸ್ಮಾರ್ಟ್ಕ್ಲಾಸ್ ಮೂಲಕ ಬೋಧನೆ ಮಾಡುತ್ತಾರೆ. ಬಟ್ಟೆ (ಶಾಲಾ ಸಮವಸ್ತ್ರ), ಬ್ಯಾಗ್, ಪಠ್ಯಪುಸ್ತಕ, ಕಲಿಕಾ ಸಾಮಗ್ರಿಗಳು ಸೇರಿದಂತೆ ಶಾಲೆಗೆ ಮಗು ತೆಗೆದುಕೊಂಡು ಬರುವ ಬಹುತೇಕ ಎಲ್ಲಾ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಗುತ್ತದೆ.
ಶಾಲೆಯು ಉತ್ತಮ ಕಟ್ಟಡ, ಆಟೋಟ ಮೈದಾನ ಕ್ರೀಡಾ ಸಾಮಗ್ರಿಗಳನ್ನು ಹೊಂದಿದ್ದು ಕಲಿಕೆಗೆ ಪೂರಕವಾಗಿದೆ. ಜೂನ್ 1ರ ಶನಿವಾರದಂದು ಪ್ರವೇಶ ಪರೀಕ್ಷೆ ಇದ್ದು, ಆಸಕ್ತರು ಮೌಲಾನಾ ಆಜಾದ್ ಮಾದರಿ ಶಾಲೆ ಹೊಸಪೇಟೆ ಶಾಲೆಗೆ ಭೇಟಿ ನೀಡಿ ಪ್ರವೇಶ ಪರೀಕ್ಷೆಗೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ 9945951963, 9632383157, 7259651119 ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಮಂಜುನಾಥ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮುಂಚೆ ಯಾವುದೇ ಅರ್ಜಿ ಸಲ್ಲಿಸದೇ ಇದ್ದರೂ ಪ್ರವೇಶ ಪರೀಕ್ಷೆಗೆ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.