
ಯಡ್ಡೋಣಿ ಐಟಿಐ ಸಂಸ್ಥೆ : ಪ್ರವೇಶಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 5- ಯಲಬುರ್ಗಾ ತಾಲ್ಲೂಕಿನ ಯಡ್ಡೋಣಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಐಟಿಐ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಥೆಯಲ್ಲಿ ಫಿಟ್ಟರ್ ಮತ್ತು ಎಲೆಕ್ಟಿçಷಿಯನ್ ವೃತ್ತಿಗಳು ಎನ್.ಸಿ.ವಿ.ಟಿ. ನವದೆಹಲಿಯವರ ಶಾಶ್ವತ ಸಂಯೋಜನೆ ಹೊಂದಿವೆ. ಅರ್ಜಿ ಸಲ್ಲಿಸಲು ಜೂನ್ 09 ಕೊನೆಯ ದಿನವಾಗಿದ್ದು, ಎಸ್‌ಎಸ್‌ಎಲ್‌ಸಿ ಪಾಸಾದ ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ www.cite.karnataka.gov.in ನಲ್ಲಿ ಸ್ವತಃ ಅಥವಾ ಸಂಸ್ಥೆಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ : 9113682527, 900812662 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.