
ಯಲಬುರ್ಗಾ : ಡೇ-ನಲ್ಮ್ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 28- ಯಲಬುರ್ಗಾ ಪಟ್ಟಣ ಪಂಚಾಯತ್ ವತಿಯಿಂದ 2024-25ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನ ರಾಜ್ಯ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯಕ್ಕಾಗಿ 4 ಜನ ಫಲಾನುಭವಿಗಳಿಗೆ, 10 ಸ್ವಸಹಾಯ ಗುಂಪು ರಚನೆ ಹಾಗೂ 5 ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ (ಕ್ರೇಡಿಟ್ ಲಿಂಕೇಜ್)ದ ಗುರಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 18 ರಿಂದ 35 ವರ್ಷದೊಳಗಿರಬೇಕು. ಅರ್ಜಿಗಳನ್ನು ಪಟ್ಟಣ ಪಂಚಾಯತ್ ಕಾರ್ಯಾಲಯದ ವಿಷಯ ನಿರ್ವಾಹಕರ ಹತ್ತಿರ ಪಡೆದು ಭರ್ತಿ ಮಾಡಿ, ಪ್ರಸಕ್ತ ಸಾಲಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಬಿ.ಪಿ.ಎಲ್ ರೇಶನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜುಲೈ 10 ರೊಳಗೆ ಕಚೇರಿ ವೇಳೆಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಎಂದು ಯಲಬುರ್ಗಾ ಪಟ್ಟಣ ಪಂಚಾಯತ್ ಮುಖ್ಯಧಿಕಾರಿಗಳು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.