
ಯಲಬುರ್ಗಾ : ಬಾಲ್ಯವಿವಾಹದಿಂದ ಬಾಲಕಿಯ ರಕ್ಷಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,30- ಯಲಬುರ್ಗಾ ತಾಲ್ಲೂಕಿನ ಹುಲೇಗುಡ್ಡ ಗ್ರಾಮದ ಅಪ್ರಾಪ್ತ ಬಾಲಕಿಗೆ ನಿಶ್ಚಯವಾಗಿದ್ದ ಬಾಲ್ಯವಿವಾಹವನ್ನು ಯಲಬುರ್ಗಾ ತಹಶೀಲ್ದಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ತಂಡದಿAದ ತಡೆಯಲಾಗಿದ್ದು, ಬಾಲಕಿಯನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ.
ಯಲಬುರ್ಗಾ ತಾಲ್ಲೂಕಿನ ಹುಲೇಗುಡ್ಡ ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯ ವಿವಾಹವನ್ನು ಯಲಬುರ್ಗಾ ತಾಲೂಕಿನ ಸಾಲಭಾವಿ ಗ್ರಾಮದ ವ್ಯಕ್ತಿಯೊಬ್ಬರೊಂದಿಗೆ ಮಾರ್ಚ್ 29 ರ ತಡರಾತ್ರಿ ಹುಲೇಗುಡ್ಡ ಗ್ರಾಮದಲ್ಲಿ ಮಾಡಲು ನಿಶ್ಚಯಿಸಲಾಗಿತ್ತು. ಈ ಬಗ್ಗೆ ಮಕ್ಕಳ ಸಹಾಯವಾಣಿ-1098/112ಗೆ ಮಾಹಿತಿಯು ಲಭ್ಯವಾದ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ಯಲಬುರ್ಗಾ ತಹಶೀಲ್ದಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕಿಯರು, ಪೊಲೀಸ್ ಸಿಬ್ಬಂದಿ ತುರ್ತಾಗಿ ರಾತ್ರಿ 11 ಗಂಟೆಗೆ ಸ್ಥಳಕ್ಕೆ ಧಾವಿಸಿ, ಬಾಲಕಿಯ ಮನೆಗೆ ಭೇಟಿ ಮಾಡಿ ಪರಿಶೀಲಿಸಿದಾಗ ವಿವಾಹವನ್ನು ಮಾಡುತ್ತಿರುವುದು ಕಂಡುಬAದಿರುತ್ತದೆ.
ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಕುರಿತು ಹಾಗೂ ಬಾಲ್ಯವಿವಾಹದ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ತಿಳುವಳಿಕೆಯನ್ನು ನೀಡಿ, ಬಾಲಕಿಗೆ 18 ವರ್ಷ (ಜನ್ಮ ದಿನಾಂಕ:09.04.2008) ಪೂರ್ಣಗೊಳ್ಳದ ಕಾರಣ ಬಾಲಕಿಯನ್ನು ರಕ್ಷಿಸಿ, ಪೋಷಣೆ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರು ಪಡಿಸಲಾಯಿತು.
ಸದ್ಯ ಬಾಲಕಿಗೆ ಬಾಲಕಿಯರ ಬಾಲಮಂದಿರದಲ್ಲಿ ತಾತ್ಕಾಲಿಕ ಆಶ್ರಯವನ್ನು ಕಲ್ಪಿಸಲಾಗಿದೆ ಎಂದು ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.