
ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ : ಛಲವಾದಿ ನಾರಾಯಣಸ್ವಾಮಿ
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 28- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ, ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಿಗಾಗಿ ಮೀಸಲಿಟ್ಟಿರುವ ಹಣವನ್ನು ರಾಜ್ಯದಲ್ಲಿ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ಮಾಡುತ್ತಾ ಇದೆ ಎಂದು ಬಿಜೆಪಿ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದರು.
ಶುಕ್ರವಾರ ಪರಿಶಿಷ್ಟ ಜನರ ಅಭಿವೃದ್ಧಿಗಾಗಿ ಮೀಸಲಿದ್ದ, ಹಣವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಲಾಗುತ್ತಿದೆ ಎಂದು ಇದು ನಿಲ್ಲಿಸಲು ಆಗ್ರಹಿಸಿ ಬಳ್ಳಾರಿ ನಗರದಲ್ಲಿ ಬಿಜೆಪಿ ನಡೆಸಿತು. ನಗರ ಆರಾಧ್ಯ ದೇವತೆ ಕನಕದುರ್ಗಮ್ಮ ದೇವಸ್ಥಾನದಿಂದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಅಧಿಕಾರ ಬಿಟ್ಟು ಕಾಂಗ್ರೆಸ್ ತೊಲಗಲಿ ಎಂದು ಗಡಿಗೆ ಚೆನ್ನಪ್ಪ ಸರ್ಕಲ್ ಸಮೀಪ ಮಾನವ ಹಾರ ಮಾಡಿ ಘೋಷಣೆ ಕೂಗಲಾಯಿತು. ನಂತರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ನಾರಾಯಣಸ್ವಾಮಿ ಮಾತನಾಡಿದರು.
ವಿಧಾನಸಭಾ ಚುನಾವಣೆಯಲ್ಲಿ, ಅಧಿಕಾರದ ಆಸೆಯಿಂದ ಆಮಿಷಗಳನ್ನು ಒಡ್ಡಿ, ಗ್ಯಾರೆಂಟಿ ಯೋಜನೆಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದರು. ಯೋಜನೆಗಳು ಅನಿಸ್ತಾನುಗೊಳಿಸಲು ಬೇಕಾದ ಹಣ ಕಾಂಗ್ರೆಸ್ ಸರ್ಕಾರದ ಕಜನೆಯಲ್ಲಿ ಖಾಲಿಯಾಗಿರುವುದರಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಮೀಸಲಾಗಿ ಇಟ್ಟಿರುವ ಹಣವನ್ನು ಬಳಸಿಕೊಳ್ಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಈ ವಿಧಾನ ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ಕಾಂಗ್ರೆಸ್ ಮಾಡುತ್ತಾ ಇದೆ ಎಂದು ವ್ಯಂಗ್ಯ ಮಾಡಿದರು. ನಂತರ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಪತ್ರ ಸರ್ಕಾರಕ್ಕೆ ಕಳಿಸಿಕೊಡಲಾಯಿತು.
ಕಾರ್ಯಕ್ರಮದಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ್ ರೆಡ್ಡಿ, ಬಳ್ಳಾರಿ ಮಾಜಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಸತೀಶ್ ಹಾಗೂ ಬಿಜೆಪಿ ಮುಖಂಡರು ಡಾಕ್ಟರ್ ಮಹಿಪಾಲ್, ಬಿಜೆಪಿ ಜಿಲ್ಲಾಧ್ಯಕ್ಷ, ಅನಿಲ್ ನಾಯ್ಡು, ಮೀಡಿಯಾ ಇಂಚಾರ್ಜ್ ಮಲ್ಲೇಶ್ ಹಾಗೂ ಬಿಜೆಪಿ ಮುಖಂಡರು ಕಾರ್ಯಕರ್ತರು ಹಲವಾರು ಮಂದಿ ಪಾಲ್ಗೊಂಡಿದ್ದರು.