
ಯುಗಾದಿ ಹಬ್ಬದ ಪ್ರಯುಕ್ತ ಏ.1 ರಿಂದ ಶ್ರೀಶೈಲಂಗೆ ವಿಶೇಷ ಬಸ್ ವ್ಯವಸ್ಥೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,30- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದಿಂದ ಬಳ್ಳಾರಿ, ಮೋಕಾ, ಕುರುಗೋಡು, ಕಂಪ್ಲಿ, ಎಮ್ಮಿಗನೂರು, ಸಿರುಗುಪ್ಪ, ತೆಕ್ಕಲಕೋಟೆ, ಹಳೇಕೋಟೆ, ತೋರಣಗಲ್ಲು, ಸಂಡೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಯುಗಾದಿ ಹಬ್ಬದಂದು ಜರುಗಲಿರುವ ಶ್ರೀ ಭ್ರಮರಾಂಬಾ ಮಲ್ಲಿಕಾರ್ಜುನ ಸ್ವಾಮಿಯ ವಿಶೇಷ ದರ್ಶನಕ್ಕಾಗಿ ತೆರಳುತ್ತಿದ್ದು, ಭಕ್ತಾಧಿಗಳ ಅನುಕೂಲಕ್ಕಾಗಿ ಏ.01 ರಿಂದ 11 ರ ವರೆಗೆ ವಿಶೇಷ ಸಾರಿಗೆ ಸೌಕರ್ಯವನ್ನು ಒದಗಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಳ್ಳಾರಿ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ : ಬಳ್ಳಾರಿ-1ನೇ ಘಟಕ ವ್ಯವಸ್ಥಾಪಕರ ಮೊ.7760992163, ಬಳ್ಳಾರಿ-2ನೇ ಘಟಕ ವ್ಯವಸ್ಥಾಪಕರ ಮೊ.7760992164, ಸಿರುಗುಪ್ಪ ಘಟಕ ವ್ಯವಸ್ಥಾಪಕರ ಮೊ.7760992165, ಕುರುಗೋಡು ಘಟಕ ವ್ಯವಸ್ಥಾಪಕರ ಮೊ.9606483671, ಸಂಡೂರು ಘಟಕ ವ್ಯವಸ್ಥಾಪಕರ ಮೊ.7760992309ಗೆ ಸಂಪರ್ಕಿಸಬಹುದು. ಈ ಸಾರಿಗೆ ಸೇವೆಯನ್ನು ಸಾರ್ವಜನಿಕ ಪ್ರಯಾಣಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.