
ರಾಜ್ಯ ಸರ್ಕಾರದಿಂದ ನಿರಾಶಾದಾಯಕ ಬಜೆಟ್
ಜೆ ಡಿ (ಎಸ್) ಜಿಲ್ಲಾಧ್ಯಕ್ಷ ಸುರೇಶ್ ಭೂಮರೆಡ್ಡಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 07- ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ನಿರಾಶದಾಯಕವಾಗಿದೆ ಎಂದು ಕೊಪ್ಪಳ ಜಿಲ್ಲಾ ಘಟಕದ ಜೆ ಡಿ (ಎಸ್) ಜಿಲ್ಲಾಧ್ಯಕ್ಷರಾದ ಸುರೇಶ್ ಭೂಮರೆಡ್ಡಿ ಟೀಕಿಸಿದ್ದಾರೆ.
ಕೊಪ್ಪಳಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡಿರುವುದು ಹಾಗೂ ನ್ಯಾಯಾಲಯ ಕಟ್ಟಡಕ್ಕೆ ಅನುದಾನ ಒದಗಿಸಿರುವುದು ಸ್ವಾಗತರ್ಹವೇನೋ ಸರಿ. ಆದರೆ ಸಮಾನಾಂತರ ಜಲಾಶಯದ ಬಗ್ಗೆ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪ ಇಲ್ಲ. ಮೂಲಭೂತ ಸೌಕರ್ಯಗಳ ಗುಣಮಟ್ಟಕ್ಕೆ ವಿಶೇಷ ಅನುದಾನ ಇಲ್ಲ. ಯೋಜನೆಗಳ ಅನುಷ್ಠಾನಕ್ಕಾಗಿ ಹೆಚ್ಚಿನ ಸಾಲ ಮಾಡುವುದರಿಂದ ಆರ್ಥಿಕ ಆಶಿಸ್ತು ನಿಶ್ಚಿತ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕಿಡಿ ಕಾರಿದ್ದಾರೆ.
ಭರವಸೆಗಳ ಮಹಾಪುರವೇ ಇದೆ. ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಣಕಾಸು ಹೇಗೆ ಹೊಂದಿಸುತ್ತಾರೆ ಎಂಬುದು ಗೊತ್ತಿಲ್ಲ. ಕಳೆದ ಸಲ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಾವಿರಾರು ಕೋಟಿ ಅನುದಾನ ಘೋಷಣೆ ಮಾಡಿದರು. ಆದರೆ ಹಣ ಬಿಡುಗಡೆ ಮಾಡಲೇ ಇಲ್ಲ. ಈ ಸಲವೂ ಅದೇ ಮುಂದುವರೆದಿದೆ. ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಗಳ ಬಗ್ಗೆ ಪ್ರಸ್ತಾಪವಿಲ್ಲ. ಇದು ದೂರದೃಷ್ಟಿ ಇಲ್ಲದ, ಅರ್ಥ ವ್ಯವಸ್ಥೆಯನ್ನು ಸದೃಢಗೊಳಿಸದ ಹಾಗೂ ನಿರಾಶಾದಾಯಕ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ.