IMG-20231031-WA0014

ರಾಷ್ಟ್ರದ ಏಕೀಕರಣಕ್ಕೆ ಸರ್ದಾರ್ ವಲ್ಲಬಾಯ್ ಪಟೇಲ್ ಕೊಡುಗೆ ಅಪಾರ

ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 30- ರಾಷ್ಟ್ರದ ಏಕತೆ,ಸಮಗ್ರತೆ ಹಾಗೂ ಏಕೀಕರಣಕ್ಕಾಗಿ ತಮ್ಮನ್ನು ತಾವು ಸಂಪೂರ್ಣ ತೊಡಗಿಸಿಕೊಂಡವರು ಸರ್ದಾರ್ ವಲ್ಲಭಭಾಯಿ ಪಟೇಲರು ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಚೇಳ್ಳಗುರ್ಕಿ ಹೇಳಿದರು.
ಅವರು ತಾಲ್ಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲ್ಲಭಭಾಯಿ ಪಟೇಲರ ಜನ್ಮದಿನದ ನೆನಪಿಗಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತಾ ದಿನದಲ್ಲಿ ಪಾಲ್ಗೊಂಡು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ ಸ್ವತಂತ್ರ ಭಾರತದ ಮೊದಲ ಉಪಪ್ರಧಾನಿ ಹಾಗೂ ಗೃಹಸಚಿವರಾಗಿ ಅಂದು ದೇಶದಲ್ಲಿ ಸಕ್ರೀಯವಾಗಿದ್ದ 565 ರಾಜಸಂಸ್ಥಾನಗಳನ್ನು ಒಟ್ಟು ಗೂಡಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೇರಿಸಿದವರು ಪಟೇಲರು.
ಆದ್ದರಿಂದ ವಿದ್ಯಾರ್ಥಿಗಳು ಪಟೇಲರ ದೇಶಾಭಿಮಾನ ಗುಣ, ಧೈರ್ಯ, ಸಾಹಸ ಹಾಗೂ ಒಟ್ಟಾಗಿ ಬಾಳುವ ಗುಣಗಳನ್ನು ಮೈಗೂಡಿಸಿಕೊಂಡು ರಾಷ್ಟ್ರಾಭಿವೃದ್ಧಿಗೆ ಶ್ರಮಿಸಬೇಕೆಂದು ಹೇಳಿದರು.
ಪ್ರತಿಭಾವಂತ ವಿದ್ಯಾರ್ಥಿಗಳಾದ ವಿನಯ್, ಕೇರಳಪ್ಪ,ನಂದಿನಿ, ವೈಷ್ಣವಿ, ಇಂದು ಶ್ರೀ, ಹಾಗೂ ಬಿಂದು ಗೆ ಬಹುಮಾನ ವಿತರಿಸಲಾಯಿತು.
ನಂತರ ಮಕ್ಕಳಿಗೆ ಏಕತಾ ದಿನದ ಪ್ರತಿಜ್ಞೆ ಬೋಧಿಸಲಾಯಿತು.ಶಿಕ್ಷಕರಾದ ಬಸವರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕರಾದ ಮೋದಿನ್ ಸಾಬ್,ಚನ್ನಮ್ಮ, ಸುಮತಿ, ಸುಧಾ, ವೈಶಾಲಿ, ಶ್ವೇತಾ, ಉಮ್ಮೆಹಾನಿ,ಶಶಮ್ಮ, ರಾಮಾಂಜಿನೇಯ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಮಹೇಶ, ಸಣ್ಣ ದುರ್ಗೇಶ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!