WhatsApp Image 2024-02-09 at 8.10.30 PM

ರಾಷ್ಟ್ರೀಯ ಪಲ್ಸ್ ಪೋಲಿಯೋ ಬಗ್ಗೆ ತರಬೇತಿ : ಡಾ. ಮಂಜುನಾಥ ಬ್ಯಾಲಹುಣಸಿ

ಕರುನಾಡ ಬೆಳಗು ಸುದ್ದಿ

ಕುಕನೂರ,10- ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕೊಪ್ಪಳ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕುಕನೂರ ಇವರುಗಳ ಸಹಯೋಗದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಮಂಜುನಾಥ ಬ್ಯಾಲಹುಣಸಿ ರವರು ಆಶಾ ಕಾರ್ಯಕರ್ತೆಯರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮದ ತರಬೇತಿಯನ್ನು ನೀಡಿದರು ಹಾಗೂ ಮಾರ್ಚ್ 3 ರಿಂದ 6 ರ ವರಗೆ ಪಲ್ಸ್ ಪೋಲಿಯೋ ನಡೆಯಲಿದ್ದು ಆದರಿಂದ ಸಾರ್ವಜನಿಕರು 0 ದಿಂದ 5 ವರ್ಷದ ಮಕ್ಕಳನ್ನು ತಮ್ಮ ಸಮೀಪದ ಪೋಲಿಯೋ ಬುತಗೆ ಕರೆದು ತಂದು ಪ್ರತಿಶತ 100/ ರಷ್ಟು ಪ್ರಗತಿ ಸಾಧಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳು,ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!