
ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ಜ.12ಕ್ಕೆ
ಕರುನಾಡ ಬೆಳಗು ಸುದ್ದಿ
ಹೊಸಪೇಟೆ(ವಿಜಯನಗರ)ಜ.10 : ಹೊಸಪೇಟೆ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಶ್ರೀ ಗುರು ಪಿ.ಯು. ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಜನವರಿ 12ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಶ್ರೀ ಗುರು ಪಿ.ಯು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮಾನ್ ಎ ನಂದಗಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶ್ರೀ ಗುರು ಪಿ.ಯು ಕಾಲೇಜಿನ ಪ್ರಾಚಾರ್ಯರಾದ ವಿನೋದ್ ಕುಮಾರ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಹೇಮಲತಾ ಬಿ.ಹುಲ್ಲೂರ, ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಮೇಶ ಬಾಬು ಬಿ.ಎನ್., ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಕಿಶನ್ ಬಿ.ಮಾಡಲಗಿ, ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಧೀಶರಾದ ತೃಪ್ತಿ ಧರಣಿ, 3ನೇ ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಚೈತ್ರ ಜೆ., ಡಿ.ಡಿ.ಪಿ.ಓ ನಾಗರಾಜ್ ಹವಲ್ದಾರ್, ಗ್ರಾಮೀಣ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕರಾದ ದೀಪಕ್ ಬೋಸ್ ರೆಡ್ಡಿ, ವಕೀಲರ ಸಂಘದ ಅಧ್ಯಕ್ಷರಾದ ಕೆ.ಪ್ರಹ್ಲಾದ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಪಿ.ಶ್ರೀನಿವಾಸ ಮೂರ್ತಿ ಭಾಗವಹಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ವಕೀಲರಾದ ಕೆ.ಜಂಬಣ್ಣ ಪಾಲ್ಗೊಳ್ಳಲಿದ್ದಾರೆ ಎಂದು ಹೊಸಪೇಟೆ ತಾಲ್ಲೂಕು ಕಾನೂನು ಸೇವಾ ಸಮಿತಿ ಪ್ರಕಟಣೆ ತಿಳಿಸಿದೆ.