
ರೈತರು ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳ ಸದುಪಯೋಗ ಪಡದುಕೂಳ್ಳಿ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ, 7- ನೆರೇಗಾ ಯೋಜನೆಯಡಿಯಲ್ಲಿ ಗ್ರಾಮದ ರೈತರು ವೈಯಕ್ತಿಕ ಕಾಮಗಾರಿಗಳನ್ನು ಪಡೆದು ಆರ್ಥಿಕವಾಗಿ ಸಬಲರಾಗಬೇಕು. ಸಾರ್ವಜನಿಕರು ಈ ಯೋಜನೆ ಸದುಪಯೋಗ ಪಡದುಕೂಳ್ಳಬೇಕು, ಎಂದು ತಾ.ಪಂ ಸಹಾಯಕ ನಿರ್ದೇಶಕರಾದ ಹನಮಂತಗೌಡ ಪೊಲೀಸ್ ಪಾಟೀಲ್ ಹೇಳಿದರು.
ತಾಲೂಕಿನ ಸಂಗನಹಾಳ ಗ್ರಾಮದಲ್ಲಿ ನರೇಗಾ ಯೋಜನೆಯಡಿಯಲ್ಲಿ ಆರಂಭವಾಗಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ ಹಾಗೂ ಸ್ವೀಪ್ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನದ ಅಂಗವಾಗಿ ಎರಡು ತಿಂಗಳ ನಿರಂತರ ಕೆಲಸ ನೀಡಲಾಗುವುದು. ಎಲ್ಲಾ ಅಕುಶಲ ಕೂಲಿಕಾರರು ಇದರ ಸದುಪಯೋಗ ಪಡೆಯಬೇಕು. ಜಮೀನು ಹೊಂದಿರುವ ರೈತರು ತಮ್ಮ ಜಮೀನಿನಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಲಹೆ ನೀಡಿದರು.
ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ನರೇಗಾ ಕೂಲಿಕಾರರು ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಬೇಕು. ಈ ಬಾರಿ ಸಂಗನಹಾಳ ಗ್ರಾಮದಲ್ಲಿ ಅತಿಹೆಚ್ಚು ಮತದಾನವಾಗಬೇಕು. ಕಳೆದ ಚುನಾವಣೆಯಲ್ಲಿ ನಿರಂತರವಾಗಿ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಂಡಿದ್ದರಿಂದ ಶೇಕಡಾ 2 ರಷ್ಟು ಹೆಚ್ಚಿನ ಮತದಾನವಾಗಿತ್ತು. ಅದರಂತೆ ಈ ಬಾರಿಯೂ ಸಂಗನಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೆಚ್ಚು ಮತದಾನವಾಗಬೇಕು. ನರೇಗಾ ಕೂಲಿಕಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ಅಂದಿನ ದಿನ ನರೇಗಾ ಕೆಲಸಕ್ಕೆ ರಜೆ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾ.ಪಂ ತಾಂತ್ರಿಕ ಸಂಯೋಜಕರಾದ ಸಂತೋಷ ನಂದಾಪುರ, ತಾ.ಪಂ ಐಇಸಿ ಸಂಯೋಜಕರಾದ ಶರಣಪ್ಪ ಹಾಳಕೇರಿ ಅವರು ನರೇಗಾ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪಿಡಿಓ ಸರ್ವಮಂಗಳ, ಕರವಸೂಲಿಗಾರ ಶರಣಪ್ಪ, ಬಿಎಫ್ ಟಿ ಶಿವಪ್ಪ ಸೂಡಿ, ಕಾಯಕ ಬಂಧುಗಳು, ಕೂಲಿಕಾರರು ಮತ್ತು ಇತರರು ಭಾಗವಹಿಸಿದ್ದರು