ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ಪ್ರಾರಂಭ (3)

ಲೋಕಸಭಾ ಸಾರ್ವತ್ರಿಕ ಚುನಾವಣೆನ : ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ಪ್ರಾರಂಭ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 27- 08-ಕೊಪ್ಪಳ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬAಧ 12 ಡಿ ನಲ್ಲಿ ಅರ್ಜಿ ಸಲ್ಲಿಸಿರುವ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಚೇತನ ಮತದಾರರಿಗೆ ಹಾಗೂ ಕೋವಿಡ್ ಸೋಂಕಿತ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗವು 08-ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಮೇ 07 ರಂದು ನಿಗದಿಪಡಿಸಿದಂತೆ, ಭಾರತ ಚುನಾವಣಾ ಆಯೋಗವು ಮಾರ್ಗಸೂಚಿ ಪ್ಯಾರಾ 15.2 ರಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ, ವಿಶೇಷ ಚೇತನ ಮತದಾರರಿಗೆ ಹಾಗೂ ಕೋವಿಡ್ ಸೋಂಕಿತ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಸೌಲಭ್ಯ ಕಲ್ಪಿಸಲು ನಿರ್ದೇಶಿಸಿದ್ದರ ಹಿನ್ನೆಲೆಯಲ್ಲಿ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯನ್ನು ಏಪ್ರಿಲ್ 25 ರಂದು ಕೊಪ್ಪಳ, ಕುಷ್ಟಗಿ, ಗಂಗಾವತಿ, ಕನಕಗಿರಿ, ಮಸ್ಕಿ ಮತ್ತು ಸಿಂಧನೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರಾರಂಭಿಸಲಾಗಿದ್ದು ಮತ್ತು ಸಿರಗುಪ್ಪ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏ.26ರಂದು ಹಾಗೂ ಯಲಬುರ್ಗಾದಲ್ಲಿ ಏ.27ರಂದು ಮನೆಯಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದೆ. ಈ ಕುರಿತು ಅರ್ಹ ಮತದಾರರಿಗೆ ಮತದಾನ ಪ್ರಕ್ರಿಯೆ ಕುರಿತು ಮುಂಚಿತವಾಗಿಯೇ ಬಿ.ಎಲ್.ಓ.ಗಳ ಮುಖಾಂತರ ವೋಟರ್ ಸ್ಲಿಪ್ ಮತ್ತು ವೋಟರ್ ಗೈಡ್ ನೀಡುವ ಮೂಲಕ ಮತದಾನದ ದಿನಾಂಕ ಮತ್ತು ಸಮಯವನ್ನು 08-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಸಂಬAಧಿಸಿದ ಎಲ್ಲಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳ ಹಂತದಲ್ಲಿ ತಿಳಿಯಪಡಿಸಲಾಗಿರುತ್ತದೆ.

ಅಂತಿಮವಾಗಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳಿಗೆ ಸಹ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಮತದಾನದ ದಿನದಂದು ನಿಗದಿಪಡಿಸಲಾದ ರೂಟ್‌ಗಳಿಗೆ ಮತದಾನ ಏಜೆಂಟರನ್ನು ನೇಮಕ ಮಾಡಲು ತಿಳಿಸಲಾಗಿರುತ್ತದೆ.

ಅಲ್ಲದೆ 08-ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1,361 ಹಿರಿಯ ನಾಗರಿಕ ಮತದಾರರು, 576 ವಿಶೇಷ ಚೇತನ ಮತದಾರರು ಸೇರಿ ಒಟ್ಟು 1,937 ಮತದಾರರಿದ್ದು, ಕೋವಿಡ್ ಸೋಂಕಿತ ಮತದಾರರು ಯಾರೂ ಇರುವುದಿಲ್ಲ. ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮನೆಯಿಂದಲೇ ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಸಲು ಒಟ್ಟು 81 ತಂಡಗಳನ್ನು ರಚಿಸಿದೆ. 81 ರೂಟ್‌ಗಳನ್ನು ಸಿದ್ಧಪಡಿಸಲಾಗಿದ್ದು, ಈ ಪ್ರಕ್ರಿಯೆಯನ್ನು ನೋಡಿಕೊಳ್ಳಲು ನೋಡಲ್ ಅಧಿಕಾರಿಗಳನ್ನು, ಮತದಾನದ ಸಿಬ್ಬಂದಿಗಳನ್ನು, ಭದ್ರತಾ ಮತ್ತು ಸಹಾಯಕ ಸಿಬ್ಬಂದಿಗಳನ್ನು ನೇಮಕ ಮಾಡಿ ಮೂಲಭೂತ ಸೌಲಭ್ಯಗಳನ್ನು ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಒದಗಿಸಲಾಗಿರುತ್ತದೆ.

ಏ.25 ಹಾಗೂ 26ರಂದು ನಡೆದ ಮತದಾನ ಪ್ರಕ್ರಿಯೆಯಲ್ಲಿ ಒಟ್ಟು ಮತದಾರರ ಪೈಕಿ 1,628 ಜನರಿಂದ ಮತದಾನವಾಗಿದ್ದು, ಅದರಲ್ಲಿ 1,120 ಹಿರಿಯ ನಾಗರಿಕರು ಹಾಗೂ 508 ವಿಶೇಷ ಚೇತನ ಮತದಾರರು ಮತ ಚಲಾಯಿಸಿರುತ್ತಾರೆ. ಈ ದಿನದಂದು 58-ಸಿಂಧನೂರು 59-ಮಸ್ಕಿ, 60-ಕುಷ್ಟಗಿ, 61- ಕನಕಗರಿ, 62-ಗಂಗಾವತಿ, 64-ಕೊಪ್ಪಳ, 92-ಸಿರಗುಪ್ಪ ಒಟ್ಟು 07 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಸುಗಮವಾಗಿ ಮತ್ತು ಶಾಂತ ರೀತಿಯಿಂದ ಮುಕ್ತಾಯಗೊಂಡಿರುತ್ತದೆ. ಪ್ರತಿದಿನ ಸಾಯಂಕಾಲ ಮತದಾನ ಮುಗಿದ ನಂತರ ಅಂಚೆ ಮತ ಪತ್ರಗಳನ್ನು ಆಯಾ ವಿಧಾನಸಭಾ ಕ್ಷೇತ್ರವಾರು ಕ್ರೋಢೀಕರಿಸಿ ನಿಯಮಾನುಸಾರ ಚುನಾವಣಾಧಿಕಾರಿಗಳ ಕಸ್ಟಡಿಗೆ ಒಪ್ಪಿಸಲು ಕ್ರಮ ವಹಿಸಲಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!