ಲೋಕಸಭಾ ಸಾರ್ವತ್ರಿಕ ಚುನಾವಣೆ : ಸಹಕರಿಸಿದ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಅಭಿನಂದನೆ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ -ಕೊಪ್ಪಳ ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಕೊಪ್ಪಳ ಲೋಕಸಭಾ ಕ್ಷೇತ್ರದ ಸಿರುಗುಪ್ಪ ವಿಧಾನಸಭಾ ಮತ ಕ್ಷೇತ್ರದಲ್ಲಿ ಮೇ ತಿಂಗಳ 7ರಂದು ಜರುಗಿದ ಮತದಾನ ಹಾಗೂ ಜೂನ್ 4ರಂದು ನಡೆದ ಮತ ಎಣಿಕೆ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸುಗಮ ಹಾಗೂ ಯಶಸ್ವಿ ಚುನಾವಣೆ ನಡೆಸಲು ಸಹಕರಿಸಿದ ಎಲ್ಲಾ ಇಲಾಖೆ ಅಧಿಕಾರಿಗಳು ಪೊಲೀಸ್ ಇಲಾಖಾ ಅಧಿಕಾರಿ ಸಿಬ್ಬಂದಿಗಳು ಸಾರ್ವಜನಿಕರು ಹಾಗೂ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಕಾಲಕಾಲಕ್ಕೆ ವ್ಯಾಪಕ ಪ್ರಚಾರ ನೀಡಿ ಸಹಕರಿಸಿದ ಎಲ್ಲಾ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳಿಗೆ ಬಳ್ಳಾರಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಹಾಗೂ ಸಿರುಗುಪ್ಪ ಸಹಾಯಕ ಚುನಾವಣಾ ಅಧಿಕಾರಿ ಡಾ ತಿರುಮಲೇಶ್ ಹಾಗೂ ತಹಸಿಲ್ದಾರ್ ಶಂಸೇ ಆಲಂ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ ಜನಾಭಿಪ್ರಾಯ ಮುಖಂಡರು ಸಾಮಾಜಿಕ ಕಾರ್ಯಕರ್ತ ಎ ಅಬ್ದುಲ್ ನಬಿ ಕಚೇರಿಯ ಸಿಬ್ಬಂದಿ ವರ್ಗದವರು ಮತ್ತಿತರರು ಇದ್ದರು.
