ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,14- ಕರ್ನಾಟಕ ರಾಜ್ಯ ಲೋಕಾಯುಕ್ತ ಬೆಂಗಳೂರು ಅವರ ನಿರ್ದೇಶನದಂತೆ ಸಿರುಗುಪ್ಪ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಬಳ್ಳಾರಿ ಲೋಕಾಯುಕ್ತ ಸಿಪಿಐ ಸಂಗಮೇಶ ತಹಸಿಲ್ದಾರ್ ಶಂಶೇ ಆಲಂ ಅವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಕೆಲವು ಸಮಸ್ಯೆಗಳಿಗೆ ಉಪಸ್ಥಿತರಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡುವ ಮೂಲಕ ಸಮಸ್ಯೆಗಳನ್ನು ಬಗೆಹರಿಸುವ ಚರ್ಚೆ ನಡೆಸಿದರು ಸಾರ್ವಜನಿಕರ ಸಮಸ್ಯೆಗಳಿಗೆ ನಿಮ್ಮಲ್ಲಿ ಪರಿಹಾರವಿಲ್ಲದಿದ್ದರೆ ನಿಮ್ಮ ಮೇಲಾಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಬೇಕು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸಂಗಮೇಶ್ ಅಧಿಕಾರಿಗಳಿಗೆ ಹೇಳಿದರು.
ಸಿರುಗುಪ್ಪ ತಾಲೂಕಿನ ಬೀರಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 60 ಲಕ್ಷ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಕೊತ್ತಲಚಿಂತ ಬೈರಗಾಮದಿನ್ನಿ ಕಲ್ಲು ಕುಟಿಗನಹಾಳು ಅಕ್ಕ-ತಂಗಿಯರ ಹಾಳು ಗ್ರಾಮಗಳಲ್ಲಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಹಾಳಾಗಿದ್ದರು ಸಂಬಂಧಿಸಿದ ಅಧಿಕಾರಿಗಳು ದುರಸ್ತಿ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರು ಸಲ್ಲಿಸಿದರು.
ಹಚ್ಚೋಳ್ಳಿ ಗ್ರಾಮದಲ್ಲಿ ಜಮೀನುಗಳಿಗೆ ಹೋಗಲು ರಸ್ತೆ ಕಲ್ಪಿಸುವಂತೆ ಗ್ರಾಮಸ್ಥರಾದ ಎಚ್ ವಿರೂಪಾಕ್ಷಗೌಡ ರಾಜಕುಮಾರ ಅಬ್ದುಲ್ ಅವರು ಮನವಿ ಸಲ್ಲಿಸಿದರು ಬಗ್ಗೂರು ಗ್ರಾಮದ ಮುಖ್ಯ ರಸ್ತೆ ಕಾಮಗಾರಿ ಪೂರ್ಣಗೊಳಿಸುವುದು ಹಾಗೂ ರಸ್ತೆ ಮೇಲೆ ಹರಿಯುವ ಚರಂಡಿ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಅರ್ಜಿ ಸಲ್ಲಿಸಿದರು.
ನಗರಸಭೆ ಕಂದಾಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ತಾಲುಕ ಪಂಚಾಯತ್ ಆರೋಗ್ಯ ಇಲಾಖೆಗಳಿಗೆ ಸಂಬಂಧಿಸಿದ ದೂರುಗಳು ಸಾರ್ವಜನಿಕರಿಂದ ಲೋಕಾಯುಕ್ತ ಅಧಿಕಾರಿಗಳಿಗೆ ಸಲ್ಲಿಸಲಾಯಿತು ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಇತ್ಯರ್ಥಕ್ಕೆ ಮುಂದಾಗಬೇಕು ಎಂದು ತಹಸಿಲ್ದಾರ್ ಶಂಶೇ ಆಲಂ ಲೋಕಾಯುಕ್ತ ಸಿಪಿಐ ಸಂಗಮೇಶ್ ವಿವಿಧ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿ ತಮ್ಮನಗೌಡ ಪಾಟೀಲ್ ತಾಲೂಕ ಪಂಚಾಯತ್ ವ್ಯವಸ್ಥಾಪಕಿ ಸುಜಾತ ಕೋರಿ ಪಿಎಸ್ಐ ತಿಮ್ಮಣ್ಣ ನಾಯಕ್ ಸಿ ಡಿ ಪಿ ಓ ಪ್ರದೀಪ್ ಕುಮಾರ್ ಜನಾಭಿಪ್ರಾಯ ಮುಖಂಡ ಅಬ್ದುಲ್ ನಬಿ ಸಾರ್ವಜನಿಕರು ಸಿಬ್ಬಂದಿ ವರ್ಗದವರಿದ್ದರು ಇದ್ದರು.
