
ಲೋಕ ಅದಾಲತ್ : ಪೊಲೀಸ್ ಇಲಾಖೆಯೊಂದಿಗೆ ಪೂರ್ವಭಾವಿ ಸಭೆ
ಕರುನಾಡ ಬೆಳಗು ಸುದ್ದಿ
ವಿಜಯನಗರ4- ಜುಲೈ 13ರಂದು ನಿಗದಿಯಾದ ರಾಷ್ಟಿçÃಯ ಲೋಕ ಅದಾಲತ್ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಿದ್ಧತಾ ಸಭೆಯು ಜುಲೈ 3ರಂದು ನಡೆಯಿತು.
ಹೊಸಪೇಟೆ ತಾಲೂಕು ನ್ಯಾಯಾಲಯದ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ 3ನೇ ಹೆÀಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮಾನ್ ಎ.ನಂದಗಡಿ ಅವರು ಮಾತನಾಡಿ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಆ ನಂತರದಲ್ಲಿ ನ್ಯಾಯಾಂಗ ಇಲಾಖೆಯ ಪಾತ್ರ ಇರುತ್ತದೆ. ಹಾಗಾಗಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯು ಜವಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಲೋಕ ಅದಾಲತ್‌ನಲ್ಲಿ ಪೊಲೀಸ್ ಇಲಾಖೆಯ ಪ್ರಕರಣಗಳು ಸಹ ಇತ್ಯರ್ಥವಾಗಬೇಕು. ಪೊಲೀಸ್ ಇಲಾಖೆಗೆ ಸಂಬAಧಿಸಿದ ಪ್ರಕರಣಗಳು ಇಳಿಮುಖವಾಗಲು ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಹಕಾರ ಮತ್ತು ಸಮನ್ವಯ ಅಗತ್ಯವಾಗಿದೆ ಎಂದು ಅವರು ಸಲಹೆ ಮಾಡಿದರು.
ಕಾರ್ಯವೈಖರಿಗೆ ಮೆಚ್ಚುಗೆ: ವಿಜಯನಗರ ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ಪೊಲೀಸ್ ಇಲಾಖೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಹಾಗೂ ಅಭಿನಂದನಾರ್ಹ ಸಂಗತಿ ಎಂದು ಶ್ರೀಹರಿ ಬಾಬು ಅವರ ಕಾರ್ಯವೈಖರಿಯ ಬಗ್ಗೆ ನ್ಯಾಯಾಧೀಶರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್. ಅವರು ಮಾತನಾಡಿ, ಲೋಕ ಅದಾಲತ್‌ನಲ್ಲಿ ಗೌರವಾನ್ವಿತ ನ್ಯಾಯಾಧೀಶರ ಸೂಚನೆಗಳನ್ನು ಪಾಲಿಸಿ, ಬಾಕಿ ಉಳಿದ ಪೊಲೀಸ್ ಪ್ರಕರಣಗಳನ್ನು ಇತ್ಯರ್ಥಪಡಿಸುವಲ್ಲಿ ಶ್ರಮವಹಿಸಲಾಗುವುದು. ಕಾನೂನು ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕಾಪಾಡುವಲ್ಲಿ ಇಡೀ ರಾಜ್ಯದಲ್ಲಿಯೇ ವಿಜಯನಗರ ಜಿಲ್ಲೆಯು 4ನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.
ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಪ್ರಶಾಂತ ನಾಗಲಾಪುರ ಅವರು ಮಾತನಾಡಿದರು.
ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಹೇಮಲತಾ ಬಿ.ಹುಲ್ಲೂರು, ಗೌರವಾನ್ವಿತ ಅಪರ ಹಿರಿಯ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ರಮೇಶ್ ಬಾಬು ಬಿ.ಎನ್., ಗೌರವಾನ್ವಿತ ಪ್ರಧಾನ ಸಿವಿಲ್ ಹಾಗೂ ಗೌರವಾನ್ವಿತ ಅಪರ ಸಿವಿಲ್ ಹಾಗೂ ಜೆ.ಎಂ.ಎಫ್ ನ್ಯಾಯಾಧೀಶರಾದ ಅಶೋಕ ಆರ್.ಎಚ್, ಗೌರವಾನ್ವಿತ 2ನೇ ಅಪರ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಸಂಜೀವಕುಮಾರ.ಜಿ ಮತ್ತು 3ನೇ ಅಪರ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಚೈತ್ರ.ಜೆ, ಸಹಾಯಕ ಅಭಿಯೋಜಕ ರೇವಣಸಿದ್ದಪ್ಪ ಹಾಗೂ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಲಿಮ್ ಪಾಷ ಮತ್ತು ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಸಹಾಯಕ ಎಸ್.ಬಿ.ಕಮತಗಿ ಉಪಸ್ಥಿತರಿದ್ದರು.