WhatsApp Image 2024-03-30 at 5.56.06 PM

“ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತರಿ” ಅಭಿಯಾನ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ,30- ತಾಲೂಕಿನಲ್ಲಿ 25 ಗ್ರಾಮ ಪಂಚಾಯತಿಗಳಲ್ಲಿ 10 ದಿನಗಳ ಕಾಲ “ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತರಿ” ಅಭಿಯಾನ ನಡೆಸಲಾಗಿದ್ದು, ಬೇಡಿಕೆಯನುಸಾರ ಕೂಲಿಕಾರರಿಗೆ 2024-25 ನೇ ಸಾಲಿಗೆ ದಿನಕ್ಕೆ ರೂ.316 ರಿಂದ ರೂ.349 ರ ವರೆಗೆ ದಿನಕೂಲಿ ಹೆಚ್ಚಿಸಲಾಗಿದೆ ಎಂದು ಬಳ್ಳಾರಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ತಾಲ್ಲೂಕಿನ ಸಹಾಯಕ ನಿರ್ದೇಶಕರು (ಗ್ರಾಉ), ಐಇಸಿ ಸಂಯೋಜಕರು, ತಾಂತ್ರಿಕ ಸಂಯೋಜಕರು ಮತ್ತು ತಾಲೂಕು ಎಂಐಎಸ್ ಸಂಯೋಜಕರು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮೇಟಿಗಳ ಸಭೆ ಮಾಡಿ ಮೇಟಿಗಳ ಕರ್ತವ್ಯಗಳು, ಜವಾಬ್ದಾರಿಗಳು ಕೂಲಿಕಾರರ ಬೇಡಿಕೆ ಮತ್ತು ಕೆಲಸದ ಸ್ಥಳಗಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ್ದಾರೆ.

ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ತಾಲೂಕು ಐಇಸಿ ತಂಡ ಮತ್ತು ಗ್ರಾಮ ಪಂಚಾಯತಿಯ ತಂಡಗಳಿಂದ ಪ್ರತಿ ಕುಟುಂಬಗಳನ್ನು ಸಂಪರ್ಕಿಸಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಏಪ್ರೀಲ್ ಮತ್ತು ಮೇ ತಿಂಗಳಲ್ಲಿ ಮಾನವ ದಿನಗಳ ಸೃಜನೆಗೆ ಬೇಕಾಗುವಷ್ಟು ಕೂಲಿಕಾರರಿಂದ ಮತ್ತು ಮೇಟಿಗಳಿಂದ ನಿಗದಿತ ನಮೂನೆಯಲ್ಲಿ ಗ್ರಾಮ ಪಂಚಾಯತಿಗಳಿಂದ 12450 ಕೂಲಿಕಾರ್ಮಿಕರಿಂದ ಕೆಲಸಕ್ಕಾಗಿ ಬೇಡಿಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಕೂಲಿಕಾರರು ಸಲ್ಲಿಸಿದ ಬೇಡಿಕೆಗೆ ಅನುಸಾರ ಅಂದಾಜು ಪಟ್ಟಿ ತಯಾರಿಕೆ, ತಾಂತ್ರಿಕ ಮತ್ತು ಆಡಳಿತಾತ್ಮಕ ಮಂಜೂರಾತಿಗಳನ್ನು ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಏಪ್ರೀಲ್ 1 ರಿಂದ ಮೇ ಅಂತ್ಯದವರೆಗೆ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಕನಿಷ್ಟ 500 ರಿಂದ 13200 ಕೂಲಿಕಾರರಿಗೆ ಕೆಲಸ ನೀಡಲು ಎನ್‍ಎಂಆರ್‍ಗಳನ್ನು ರೂಪಿಸಲಾಗಿದೆ.

ಸಮುದಾಯಿತ ಕಾಮಗಾರಿಗಳಾದ ಕೆರೆ, ಕಾಲುವೆ, ನಾಲಾ ಮತ್ತು ಚೆಕ್‍ಡ್ಯಾಂ ಗಳಲ್ಲಿ ಹೂಳು ತೆಗೆಯುವ ಕಾಮಗಾರಿಗಳನ್ನು ಪ್ರಾರಂಭಿಸಲಾಗುತ್ತದೆ. ವೈಯಕ್ತಿಕ ಕಾಮಗಾರಿಗಳಾದ ಬದು, ಕೃಷಿ ಹೊಂಡ, ತೋಟಗಾರಿಕೆ ಬೆಳೆಗಳು, ದನದ ಕೊಟ್ಟಿಗೆ ಮತ್ತು ಕುರಿ ಕೊಟ್ಟಿಗೆಗಳನ್ನು ಮಾಡಿಕೊಳ್ಳಬಹುದಾಗಿದೆ.

ವಿಶೇಷ ಚೇತರಿಗೂ ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಲಾಗುತ್ತಿದೆ. ಬೇಸಿಗೆ ಕಾಲದಲ್ಲಿ ನಿರಂತರವಾಗಿ ದುಡಿಯುವ ಕೈಗಳಿಗೆ ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನೀಡುವಂತೆ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!