2c136fae-be38-4577-97e1-318669006cc9

ವಸತಿ ಶಾಲೆಗಳ ಖಾಲಿ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 26- ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2024-25ನೇ ಸಾಲಿಗೆ 7, 8 ಹಾಗೂ 9ನೇ ತರಗತಿಗಳಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕೊಪ್ಪಳ ಜಿಲ್ಲೆಯ ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿನ 7, 8 & 9ನೇ ತರಗತಿ (7ನೇ ತರಗತಿ-02 (ಪ.ಜಾ-01(ಹೆಣ್ಣು), 2ಬಿ-01(ಗಂಡು) ಸ್ಥಾನಗಳು, 8ನೇ ತರಗತಿ-09 (ಪ.ಜಾ-02(ಹೆಣ್ಣು), ಪ.ವ.-02(ಗಂಡು), ಪ್ರ.ವ-1-01(ಹೆಣ್ಣು),2ಎ-01(ಗಂಡು) & 01(ಹೆಣ್ಣು), 3ಎ-01(ಗಂಡು) &01(ಹೆಣ್ಣು) ಸ್ಥಾನಗಳು ಹಾಗೂ 9ನೇ ತರಗತಿ-12 ಪ.ಜಾ.-01(ಗಂಡು) & 04(ಹೆಣ್ಣು), ಪ.ವ-01(ಹೆಣ್ಣು), ಪ್ರ.ವ-1(ಹೆಣ್ಣು), 2ಎ-03(ಗಂಡು) & 02(ಹೆಣ್ಣು), ಸ್ಥಾನಗಳು)ಗಳಲ್ಲಿ ಖಾಲಿಯಿರುವ ಸ್ಥಾನಗಳನ್ನು ಮೇರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಕೊಪ್ಪಳ ಜಿಲ್ಲೆಯ ಯಾವುದೇ ಸರ್ಕಾರಿ, ಅನುದಾನಿತ/ ಅನುದಾನ ರಹಿತ ಶಾಲೆಗಳಲ್ಲಿ ಪ್ರವೇಶ ತರಗತಿಯ ಹಿಂದಿನ ವರ್ಷದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಆದಾಯ ಮಿತಿ 2.5 ಲಕ್ಷದೊಳಗಿರಬೇಕು ಹಾಗೂ 2-ಎ, 2-ಬಿ, 3-ಎ, 3-ಬಿ ವರ್ಗದವರಿಗೆ ಆದಾಯ ಮಿತಿ 1 ಲಕ್ಷದೊಳಗಿರಬೇಕು. 9ನೇ ತರಗತಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಹಿಂದಿನ ತರಗತಿಯಲ್ಲಿ ಆಂಗ್ಲ ಮಾಧ್ಯಮದಲ್ಲಿಯೇ ಅಭ್ಯಾಸ ಮಾಡಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಕೊಪ್ಪಳ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಾಲೆಗಳನ್ನು ಹೊರತುಪಡಿಸಿ, ಉಳಿದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ವಿದ್ಯಾರ್ಥಿಗಳ ಪೋಷಕರು ತಮ್ಮ ಹತ್ತಿರದ ಯಾವುದೇ ವಸತಿ ಶಾಲೆಗಳಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಹಿಂದಿನ ವರ್ಷದ ಅಂಕಪಟ್ಟಿ, ಜಾತಿ & ಆದಾಯ ಪ್ರಮಾಣ ಪತ್ರದ ಪ್ರತಿ, ವಿಶೇಷ ವರ್ಗಕ್ಕೆ ಸೇರಿದ್ದಲ್ಲಿ ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಪ್ರಮಾಣ ಪತ್ರ, 2 ಭಾವಚಿತ್ರ ಹಾಗೂ ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಜುಲೈ 03ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!